ಅಥಣಿ (ಬೆಳಗಾವಿ): ಆರು ಜನ ಸಚಿವರು ಅವರಿಗೆ ಸಂಬಂಧಿಸಿದ ಮಾನಹಾನಿ ಕುರಿತ ಸುದ್ದಿಗಳನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದ್ರೆ ನಾನು ಯಾವುದೇ ಕೋರ್ಟ್ ಮೊರೆ ಹೋಗುವುದಿಲ್ಲ ಎಂದು ಸಚಿವ ಶ್ರೀಮಂತ ಪಾಟೀಲ ಹೇಳಿದ್ದಾರೆ.
ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಅಂದಾಜು ಎರಡು ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ನಿಂದ ಬಂದ ಆರು ಜನ ಸಚಿವರು, ಅವರ ಬಗ್ಗೆ ಸುಳ್ಳು ಆರೋಪ ಹಾಗೂ ವದಂತಿಗಳನ್ನು ಹಬ್ಬಿಸಬಹುದೆಂದು ಮುಂಜಾಗ್ರತಾ ಕ್ರಮವಾಗಿ ನ್ಯಾಯಾಲಯದ ಮೊರೆ ಹೋಗಿದ್ದು, ಸುಳ್ಳು ವರದಿ ಬಿತ್ತರವಾಗದಂತೆ ತಡೆ ಆಜ್ಞೆಯನ್ನೂ ತಂದಿದ್ದಾರೆ. ಕೆಲವರು ದುರುದ್ದೇಶ ಇಟ್ಟುಕೊಂಡು ಸಿಡಿ ಬಿಡುಗಡೆ ಮಾಡುತ್ತಿದ್ದಾರೆ. ಆದರೆ ನಾನು ಯಾವುದಕ್ಕೂ ಹೆದರುವ ಅಗತ್ಯವಿಲ್ಲ. ನಾನು ನ್ಯಾಯಾಲಯದ ಮೊರೆ ಹೋಗುವುದಿಲ್ಲ ಎಂದು ಸಚಿವ ಪಾಟೀಲ ಹೇಳಿದ್ದಾರೆ.