ಬೆಳಗಾವಿ :ಮಳೆಯಲ್ಲಿಯೇ ನಿಲ್ಲಿಸಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬೆಳಗಾವಿ ಜಿಲ್ಲಾಸ್ಪತ್ರೆಯ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಳೆಯಲ್ಲಿಯೇ ಥರ್ಮಲ್ ಸ್ಕ್ರೀನಿಂಗ್.. ಬೆಳಗಾವಿ ಜಿಲ್ಲಾಸ್ಪತ್ರೆ ಸಿಬ್ಬಂದಿ ವಿರುದ್ಧ ಜನರ ಆಕ್ರೋಶ.. - Thermal screening in the rain
ತಮ್ಮ ಊರುಗಳಿಗೆ ತೆರಳುವ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಂಡು ಪ್ರಮಾಣ ಪತ್ರ ಪಡೆಯಬೇಕು. ಇದಲ್ಲದೇ ಅವರಿಗೆ ಕೊರೊನಾ ಲಕ್ಷಣಗಳಿಲ್ಲದಿದ್ದರೂ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ.
ನಗರದ ಜಿಲ್ಲಾ ಆಸ್ಪತ್ರೆ ಆವರಣದ ಐಎಂಎ ಹಾಲ್‍ನಲ್ಲಿ ಬೇರೆ ಊರುಗಳಿಗೆ ತೆರಳುವವರು ಮತ್ತು ಬಂದವರ ಸ್ಕ್ರೀನಿಂಗ್‍ಗೆ ವ್ಯವಸ್ಥೆ ಮಾಡಲಾಗಿದೆ. ಅವರು ತಮ್ಮ ಊರುಗಳಿಗೆ ತೆರಳುವ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಿಸಿಕೊಂಡು ಪ್ರಮಾಣ ಪತ್ರ ಪಡೆಯಬೇಕು. ಇದಲ್ಲದೇ ಅವರಿಗೆ ಕೊರೊನಾ ಲಕ್ಷಣಗಳಿಲ್ಲದಿದ್ದರೂ ಸ್ಕ್ರೀನಿಂಗ್‍ಗೆ ಒಳಪಡುವುದು ಕಡ್ಡಾಯವಾಗಿದೆ. ಹೀಗಾಗಿ ಜನರು ಮಳೆಯಲ್ಲೇ ನೆನೆಯುತ್ತ ಸ್ಕ್ರೀನಿಂಗ್ ಮಾಡಿಸಿಕೊಳ್ಳುತ್ತಿದ್ದಾರೆ.
ಇನ್ನು ಮಳೆಯಲ್ಲಿ ನೆನೆಯುವುದರಿಂದ ಜ್ವರ, ಕೆಮ್ಮು, ನೆಗಡಿ ಬರುವ ಆತಂಕ ಜನರನ್ನು ಕಾಡುತ್ತಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ಬೇರೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜನ ಒತ್ತಾಯಿಸಿದ್ದಾರೆ.