ಕರ್ನಾಟಕ

karnataka

ETV Bharat / state

ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ದೂರು ದಾಖಲಿಸಿದ ಬಂಧಿಖಾನೆ ಡಿಐಜಿಪಿ - ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ

ವ್ಯಕ್ತಿಯೋರ್ವ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ, ಬೆಂಗಳೂರು ಕಾರಾಗೃಹ ಸ್ಫೋಟಿಸುವುದಾಗಿ ಬೆದರಿಕೆ ಕರೆ ಮಾಡಿದ್ದಾನೆ. ಈ ಸಂಬಂಧ ಬಂಧಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ.ಶೇಷ ದೂರು ದಾಖಲಿಸಿದ್ದಾರೆ.

threat-call-to-blow-up-hindalaga-jail-complaint-lodged-by-digp-of-jail
ಹಿಂಡಲಗಾ ಜೈಲು ಸ್ಫೋಟಿಸುವುದಾಗಿ ಬೆದರಿಕೆ ಕರೆ: ದೂರು ದಾಖಲಿಸಿದ ಬಂಧಿಖಾನೆ ಡಿಐಜಿಪಿ

By ETV Bharat Karnataka Team

Published : Oct 9, 2023, 11:52 AM IST

ಬೆಳಗಾವಿ :ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹ, ಬೆಂಗಳೂರು ಕಾರಾಗೃಹ ಮತ್ತು ನನ್ನ ವಸತಿ ಗೃಹದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆಂದು ಬಂಧಿಖಾನೆ ಇಲಾಖೆಯ ಉತ್ತರ ವಲಯ ಡಿಐಜಿಪಿ ಟಿ.ಪಿ. ಶೇಷ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಿಸಿದ್ದಾರೆ.

ಮೂರು ಪ್ರತ್ಯೇಕ ಮೊಬೈಲ್ ಸಂಖ್ಯೆಗಳಿಂದ ಭಾನುವಾರ(8 ಅಕ್ಟೋಬರ್) ಕರೆ ಮಾಡಿದ ವ್ಯಕ್ತಿಯೋರ್ವ ಹಿಂಡಲಗಾ ಕೇಂದ್ರ ಕಾರಾಗೃಹದ ಹಿರಿಯ ವೀಕ್ಷಕರಾದ ಜಗದೀಶ ಗಸ್ತಿ, ಎಸ್.ಎಂ. ಗೋಟೆ ಅವರ ಪರಿಚಿತನೆಂದು ಹೇಳಿ, ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಗಲಭೆ ಸೃಷ್ಟಿಸುತ್ತೇನೆ ಮತ್ತು ನನ್ನ ಮೇಲೆ ಹಲ್ಲೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದಾನೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕರೆ ಮಾಡಿದ ಅನಾಮಧೇಯ ವ್ಯಕ್ತಿ ತಾನು, ಕುಖ್ಯಾತ ರೌಡಿ ಬನ್ನಂಜೆ ರಾಜಾನಿಗೆ ಸಹಾಯ ಮಾಡಿರುವುದಾಗಿಯೂ ತಿಳಿಸಿದ್ದಾನೆ. ಈ ಅನಾಮಧೇಯ ವ್ಯಕ್ತಿಯಿಂದ ಕಾರಾಗೃಹದ ಆಡಳಿತಕ್ಕೆ ಧಕ್ಕೆ ಬರುವ ಸಾಧ್ಯತೆಯಿದೆ. ಹಾಗಾಗಿ, ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಡಿಐಜಿಪಿ ಟಿ.ಪಿ. ಶೇಷ ತಿಳಿಸಿದ್ದಾರೆ.

ಇದನ್ನೂ ಓದಿ :ಶಾಸಕ ಟಿಬಿ ಜಯಚಂದ್ರಗೆ ಬೆದರಿಕೆ ಕರೆ.. ಸಚಿವ ಎಚ್​ಕೆ ಪಾಟೀಲ ಹೇಳಿದ್ದೇನು?

ABOUT THE AUTHOR

...view details