ಕರ್ನಾಟಕ

karnataka

ETV Bharat / state

ಸಾರಿಗೆ ನೌಕರರ ಧರಣಿ: ಪ್ರತಿಭಟನೆ ಕೈ ಬಿಡುವಂತೆ ಪೊಲೀಸರಿಂದ ಧಮ್ಕಿ ಆರೋಪ - ETV Bharath Karnataka

ತಡ ರಾತ್ರಿ ಪೊಲಿಸರು ಪ್ರತಿಭಟನೆ ಸ್ಥಳಕ್ಕೆ ಬಂದು ಇನ್ನೂ ಎರಡು ದಿನ ಅಧಿವೇಶನಕ್ಕೆ ರಜೆ ಇರುವುದರಿಂದ ಪ್ರತಿಭಟನೆ ಕೈಬಿಡಿ ಎಂದು ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಸಾರಿಗೆ ನೌಕರರು ಆರೋಪಿಸಿದ್ದಾರೆ.

threatened by police to protesters
ಸಾರಿಗೆ ನೌಕರರ ಧರಣಿ

By

Published : Dec 24, 2022, 9:38 AM IST

ಬೆಳಗಾವಿ:ಕಳೆದ ಆರು ದಿನದಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಪ್ರತಿಭಟನೆ ಕೈ ಬಿಡುವಂತೆ ಪೊಲೀಸರು ಪ್ರತಿಭಟನಾಕಾರರಿಗೆ ಅವಾಜ್ ಹಾಕಿದ್ದಾರೆ ಎಂದು ಸಾರಿಗೆ ನೌಕರರು ಆರೋಪ ಮಾಡುತ್ತಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಬಸ್ತವಾಡ ಎಂಬ ಪ್ರದೇಶದಲ್ಲಿ ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ತಡ ರಾತ್ರಿ ಪೊಲಿಸರು ಸ್ಥಳಕ್ಕೆ ಬಂದು ಇನ್ನೂ ಎರಡು ದಿನ ಅಧಿವೇಶನಕ್ಕೆ ರಜೆ ಇರುವುದರಿಂದ ಪ್ರತಿಭಟನೆ ಕೈಬಿಡಿ ಎಂದು ಧಮ್ಕಿ ಹಾಕುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಸಾರಿಗೆ ನೌಕರರು ಆರೋಪಿಸಿದ್ದಾರೆ.

ಮುಂಜಾನೆ ನಸುಕಿನ ಜಾವದಲ್ಲಿ ಒರ್ವ ಧರಣಿ ನಿರಂತರವಾದ ಚಂದ್ರು ಎಂಬುವರ ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೊರೆಯುವ ಚಳಿಯಲ್ಲಿ ಕಳೆದ ಆರು ದಿನಗಳಿಂದ ಸಾರಿಗೆ ನೌಕರರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಹಿನ್ನೆಲೆ ಐದನೇ ದಿನವೂ ಸಾಲು ಸಾಲು ಪ್ರತಿಭಟನೆ..

ABOUT THE AUTHOR

...view details