ಬೆಳಗಾವಿ:ವಿಶ್ವೇಶ್ವರ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ರಚನೆ, ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಹಾಗೂ 2021ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಎರಡನೇ ತಿದ್ದುಪಡಿ ವಿಧೇಯಕ ಸೇರಿ ಒಟ್ಟು ಮೂರು ವಿಧೇಯಕಗಳನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು.
ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪಿಸುವ ಸಂಬಂಧ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ-2021 ಅನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಮಂಡನೆ ಮಾಡಿದರು.
ಆಯುಷ್ ಪದ್ಧತಿಯಲ್ಲಿ ಶ್ರೇಷ್ಠತೆಯ ವಿಶ್ವವಿದ್ಯಾಲಯವನ್ನಾಗಿ ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ಹೆಸರಿನ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು. ಇದರಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರೀತಿಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಈ ಮೂಲಕ ವೈದ್ಯಕೀಯ ಸಸ್ಯ ಸಂಪನ್ಮೂಲದ ಅಭಿವೃದ್ಧಿ, ಸಂಶೋದನೆ ಹಾಗೂ ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಸ್ತಾಪದಲ್ಲಿ ಸಚಿವರು ತಿಳಿಸಿದರು.
ಯುವಿಸಿಇ ವಿಶ್ವವಿದ್ಯಾಲಯ ವಿಧೇಯಕ :