ಬೆಳಗಾವಿ:ದೆಹಲಿಯಿಂದ ಸಂಪರ್ಕ ಕ್ರಾಂತಿ ರೈಲಿನಲ್ಲಿ ಬೆಳಗಾವಿಗೆ ಬಂದಿದ್ದ 20 ವರ್ಷದ ಯುವಕನ ಸಂಪರ್ಕ ಹೊಂದಿದ್ದ ತಂದೆ, ತಾಯಿ ಹಾಗೂ ಸಹೋದರನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.
ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ; ಬೆಳಗಾವಿಯಲ್ಲಿ 10ಕ್ಕೇರಿತು ಸೋಂಕಿತರ ಸಂಖ್ಯೆ - ಬೆಳಗಾವಿ ಕೊರೊನಾ ಪಾಸಿಟಿವ್ ಪ್ರಕರಣ
ಬೆಳಗಾವಿಯಲ್ಲಿ ಇಂದು ಮೂರು ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ವೈರಸ್ ಸೋಂಕಿತರ ಸಂಖ್ಯೆ 10ಕ್ಕೆ ಏರಿದೆ
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ 20 ವರ್ಷದ 128ನೇ ಸೋಂಕಿತ ಯುವಕನ ಸಂಪರ್ಕ ಹೊಂದಿದ್ದ 50 ವರ್ಷದ ತಂದೆ, 40 ವರ್ಷದ ತಾಯಿ ಹಾಗೂ 22 ವರ್ಷದ ಸಹೋದರನಿಗೆ ಕೊರೊನಾ ಸೋಂಕು ತಗುಲಿದೆ. ಹೀಗೆ ಒಂದೇ ಕುಟುಂಬದ ನಾಲ್ವರಲ್ಲಿ ಮಹಾಮಾರಿ ಸೋಂಕು ಕಂಡುಬಂದಿದೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿದೆ. 128ನೇ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಮೂವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈತನ ಸಂಪರ್ಕ ಹೊಂದಿದ್ದ ಇನ್ನೂ ಆರು ಜನರ ವರದಿ ಬರಬೇಕಿದೆ. ಉಳಿದ ಆರೂ ಜನರನ್ನು ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.