ಕರ್ನಾಟಕ

karnataka

ETV Bharat / state

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೆ ಮೂವರು ಆರೋಪಿಗಳ ಬಂಧನ - etv bharat kannada

ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಮತ್ತೆ ಮೂವರು‌ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

three-more-accused-arrested-in-kptcl-exam-scam
ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ : ಮತ್ತೆ ಮೂವರು ಆರೋಪಿಗಳ ಬಂಧನ

By

Published : Sep 17, 2022, 6:52 AM IST

ಬೆಳಗಾವಿ:ಗೋಕಾಕ್​​ ನಗರದಲ್ಲಿ ನಡೆದ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು‌ ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಕಳೆದ ತಿಂಗಳು ಆ. 07ರಂದು ಗೋಕಾಕ್​​ ನಗರದಲ್ಲಿ ನಡೆದಿದ್ದ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಸ್ಮಾರ್ಟ್ ವಾಚ್ ಬಳಸಿ ಪರೀಕ್ಷೆ ಬರೆದ ಆರೋಪ ಕೇಳಿಬಂದಿದೆ. ಅಕ್ರಮದಲ್ಲಿ ಸಹಾಯ ಸೇರಿದಂತೆ ಇಲೆಕ್ಟ್ರಾನಿಕ್ ಡಿವೈಸ್​​ಗಳನ್ನು ಮಾರಾಟ ಮಾಡಿದ ಪ್ರಕರಣ ಸಂಬಂಧ ಈಗಾಗಲೇ 17 ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ತೀವ್ರಗೊಳಿಸಿದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶುಕ್ರವಾರ ಗೋಕಾಕ್​​ ತಾಲೂಕಿನ‌ ಅರಭಾವಿ ಪಟ್ಟಣದ ಅಕ್ಷಯ್ ಭಂಡಾರಿ (33), ಬೀರಣಗಡ್ಡಿ ಗ್ರಾಮದ ಬಸವರಾಜ ದುಂದನಟಿ (34), ರಾಜಾಪೂರ ಗ್ರಾಮದ ಶ್ರೀಧರ ಕಟ್ಟಿಕಾರ್ (22) ಎಂಬುವರನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಅಕ್ಷಯ ಮತ್ತು ಶ್ರೀಧರ್ ಮೇಲೆ ಪರೀಕ್ಷಾರ್ಥಿಗಳಿಗೆ ಇಲೆಕ್ಟ್ರಾನಿಕ್ ಡಿವೈಸ್ ಕೊಟ್ಟ‌ ಆರೋಪವಿದೆ. ಬೆಂಗಳೂರಿನಿಂದ ಇಲೆಕ್ಟ್ರಾನಿಕ್ ಡಿವೈಸ್ ತಂದು ಪ್ರಕರಣದ ಪ್ರಮುಖ ಆರೋಪಿ ಸಂಜು ಭಂಡಾರಿ ಕೊಟ್ಟಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ:ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಇಲೆಕ್ಟ್ರಾನಿಕ್ ಡಿವೈಸ್​ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

ಬಂಧಿತರಿಂದ ಮೊಬೈಲ್ ಮತ್ತು 50 ಖಾಲಿ ಇಲೆಕ್ಟ್ರಾನಿಕ್ ಡಿವೈಸ್, 18 ಇಲೆಕ್ಟ್ರಾನಿಕ್ ಡಿವೈಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ಬಸವರಾಜ ಪರೀಕ್ಷಾ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿದ ಆರೋಪವಿದೆ. ಈತನಿಂದ ಒಂದು ಮೊಬೈಲ್, ಒಂದು ಬೈಕ್​​ ಜಪ್ತಿ ಮಾಡಿಕೊಳ್ಳಲಾಗಿದೆ. ಬಂಧಿತ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ:ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದ ಆರೋಪಿಗೆ NET ಪರೀಕ್ಷೆಯಲ್ಲಿ 46ನೇ ರ‍್ಯಾಂಕ್

ABOUT THE AUTHOR

...view details