ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಮತ್ತೆ ಮೂವರಿಗೆ ಕೊರೊನಾ ದೃಢ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ - belgavi corona cases updates

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೊರೊನಾ ಸೋಂಕು ರಣಕೇಕೆ ಹಾಕುತ್ತಿದ್ದು, ಜಿಲ್ಲೆಯಲ್ಲಿ ಇಂದು ಹೊಸದಾಗಿ ಮೂವರಲ್ಲಿ ಸೋಂಕು ದೃಢವಾಗಿದೆ.

three new corona posotive cases found in belagavi
ಮೂವರಿಗೆ ಕೊರೊನಾ ಸೋಂಕು

By

Published : Apr 13, 2020, 1:17 PM IST

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಪತ್ತೆ ಮೂರು ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಮೂವರಿಗೆ ಸೋಂಕು ದೃಢಪಟ್ಟಿದೆ. ಈ ಮೂವರು ರೋಗಿ ಸಂಖ್ಯೆ 149 ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರು. ಮೂವರಿಗೂ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

149 ನೇ ಸೋಂಕಿತ ವ್ಯಕ್ತಿ ದೆಹಲಿಯ ನಿಜಾಮುದ್ದೀನ್ ತಬ್ಲಿಘಿ ಮರ್ಕಜ್ ಮಸೀದಿಯಲ್ಲಿ ನಡೆದ ಧರ್ಮಸಭೆಯಲ್ಲಿ ಪಾಲ್ಗೊಂಡಿದ್ದರು. ಈತನ ಸಂಪರ್ಕ ಹೊಂದಿದ್ದ ಕುಡಚಿ ಪಟ್ಟಣದ 14 ವರ್ಷದ ಬಾಲಕ, 45 ವರ್ಷದ ವ್ಯಕ್ತಿ ಹಾಗೂ 39 ವರ್ಷದ ಪುರುಷನಿಗೆ ಸೋಂಕು ತಗುಲಿದೆ.

ABOUT THE AUTHOR

...view details