ಅಥಣಿ/ಬೆಳಗಾವಿ:ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮನೆಯಲ್ಲಿ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮನೆಯಲ್ಲಿ ಉಪಹಾರ ವ್ಯವಸ್ಥೆ - athani by election result latest updates
ಅಥಣಿ ಉಪ ಚುನಾವಣೆ ಫಲಿತಾಂಶ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮನೆಯಲ್ಲಿ ಕಾರ್ಯಕರ್ತರಿಗೆ ಉಪಹಾರ ವ್ಯವಸ್ಥೆ ಮಾಡಿಸಿದ್ದಾರೆ.
ಮಹೇಶ್ ಕುಮಟಳ್ಳಿ ಮನೆಯಲ್ಲಿ ಉಪಹಾರ ವ್ಯವಸ್ಥೆ
ಅಥಣಿ ಜನತೆ ಕೂಡ ಚುನಾವಣಾ ಲೆಕ್ಕಾಚಾರದಲ್ಲಿ ನಿರತರಾಗಿದ್ದಾರೆ. ಇನ್ನು ಅಥಣಿ ಕ್ಷೇತ್ರದಲ್ಲಿ ಬಿಜೆಪಿಯ ಮಹೇಶ್ ಕುಮಟಳ್ಳಿ ಗೆಲ್ಲುವರೆಂಬ ನಿರೀಕ್ಷೆಯನ್ನು ಕುಟುಂಬದವರು ಹೊಂದಿದ್ದಾರೆ. ಈ ಹಿನ್ನೆಲೆ ಗೆಲ್ಲುವ ವಿಶ್ವಾಸದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ಮನೆಯ ಬಳಿ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಉಪಹಾರ ತಯಾರಿ ಮಾಡಿಸಲಾಗ್ತಿದೆ.