ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಓರ್ವ ಮಹಿಳೆ ಅರೆಸ್ಟ್, ಇಬ್ಬರ ರಕ್ಷಣೆ - ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆ ಬಂಧನ

ಖಚಿತ ಮಾಹಿತಿ ಮೇರೆಗೆ ಟಿಳಕವಾಡಿ ಪೊಲೀಸರು ದಾಳಿ ನಡೆಸಿ, ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

Tilakwadi police station
Tilakwadi police station

By

Published : Oct 10, 2020, 12:55 PM IST

ಬೆಳಗಾವಿ: ಖಾನಾಪುರ ರಸ್ತೆಯ ಅಪಾರ್ಟ್ಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿರುವ ಟಿಳಕವಾಡಿ ಪೊಲೀಸರು ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.

ಚೆನ್ನಮ್ಮ ನಗರದ ನಿವಾಸಿ ದೀಪಾ ಪಾಶ್ಚಾಪುರ ಬಂಧಿತ ಮಹಿಳೆ. ಈಕೆ ಖಾನಾಪುರ ರಸ್ತೆಯ ಅಪಾರ್ಟ್ಮೆಂಟ್ ವೊಂದರಲ್ಲಿ ವಾಸವಿದ್ದು, ಅಮಾಯಕ ಮಹಿಳೆಯರನ್ನು ಸೆಳೆದು ವೇಶ್ಯಾವಾಟಿಕೆಗೆ ದೂಡುತ್ತಿದ್ದಳು ಎನ್ನಲಾಗಿದೆ.

ಖಚಿತ ಮಾಹಿತಿ ಮೇರೆಗೆ ಟಿಳಕವಾಡಿ ಠಾಣೆಯ ಪಿಐ ವಿನಾಯಕ ಬಡಿಗೇರ ನೇತೃತ್ವದ ತಂಡ ದಾಳಿ ನಡೆಸಿ ದೀಪಾಳನ್ನು ಬಂಧಿಸಿದ್ದು, ಜೊತೆಗೆ ಇಬ್ಬರು ಮಹಿಳೆಯರನ್ನು ‌ರಕ್ಷಣೆ ಮಾಡಿದ್ದಾರೆ.

ಈ ಕುರಿತು ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details