ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು - Bijagarni Village Fair

ಬೀಜಗರ್ಣಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಮಹಿಳೆವೋರ್ವಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Tipper collides with two-wheeler: Woman dies on the spot
ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು

By

Published : Mar 16, 2020, 11:08 AM IST

ಬೆಳಗಾವಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಮಹಿಳೆವೋರ್ವಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೀಜಗರ್ಣಿ ಗ್ರಾಮದ ಬಳಿ ನಡೆದಿದೆ.

ಮಾಂಡೊಳ್ಳಿ ಗ್ರಾಮದ ಮಂದಾ ಭರತ ಪಾಟೀಲ್(40) ಮೃತ ಮಹಿಳೆ. ಇನ್ನೂ ಆಕೆ ಕುಳಿತಿದ್ದ ಬೈಕ್​ ಸವಾರ ಭರತ ಪಾಟೀಲ್​ ಎಂಬುವರು ಗಾಯಗೊಂಡಿದ್ದಾರೆ. ಪಕ್ಕದ ಬೀಜಗರ್ಣಿ ಗ್ರಾಮದಲ್ಲಿ ಜಾತ್ರೆ ಇರುವುದರಿಂದ ದಂಪತಿ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು. ಜಾತ್ರೆ ಮುಗಿಸಿಕೊಂಡು ಮರಳಿ ಬರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತವಾದಾಗ ಹಿಂಬದಿ ಕುಳಿತಿದ್ದ ಮಂದಾ ಪಾಟೀಲ್​ ಅವರಿಗೆ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆಗ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details