ಬೆಳಗಾವಿ: ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿಯುತ್ತಿರೋ ಮಳೆಗೆ ಬಳ್ಳಾರಿ ನಾಲಾ ಒಳಹರಿವು ಹೆಚ್ಚಾಗಿದೆ. ಪರಿಣಾಮ ನಗರದ ಯಳ್ಳೂರ ರಸ್ತೆಯ ಪಕ್ಕದಲ್ಲಿರುವ ವಡಗಾವಿಯಲ್ಲಿ 20ಕ್ಕೂ ಹೆಚ್ಚಿನ ಮನೆಗೆಳಿಗೆ ನೀರು ನುಗ್ಗಿದೆ.
ಬೆಳಗಾವಿಯಲ್ಲಿ ಭಾರೀ ಮಳೆ: ಹಲವು ಮನೆಗಳು ಜಲಾವೃತ - ಬೆಳಗಾವಿಯಲ್ಲಿ ಮನೆಗಳಿಗೆ ನುಗ್ಗಿದ ನೀರು
ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದ ಪರಿಣಾಮ ನೂರಾರು ಮನೆಗಳು ಜಲಾವೃತವಾಗಿದ್ದು, ಸ್ಥಳೀಯ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಮನೆಗಳಿಗೆ ನುಗ್ಗಿದ ನೀರು
ನಗರ ಸೇರಿದಂತೆ ಜಿಲ್ಲೆಯಲ್ಲಿ ಆಗುತ್ತಿರುವ ಮಳೆಗೆ ಕುಂದಾನಗರಿಯ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು, ಸ್ಥಳೀಯ ನಿವಾಸಿಗಳು ಪರದಾಡುವಂತಾಗಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಬಳ್ಳಾರಿ ನಾಲಾ ಉಕ್ಕಿ ಹರಿಯುತ್ತಿದ್ದು, ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
ಪ್ರತೀ ವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಮರುಕಳಿಸುತ್ತಿದೆ. ಆದರೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಮಾತ್ರ ನೀರು ಸರಾಗವಾಗಿ ಹೋಗಲು ಪರ್ಯಾಯ ವ್ಯವಸ್ಥೆ ಮಾಡುತ್ತಿಲ್ಲ ಎಂದು ಸ್ಥಳಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.