ಬೆಳಗಾವಿ: ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಬೆಳಗಾವಿಯಲ್ಲಿ ಧಾರಾಕಾರ ಮಳೆ: 4 ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ - ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ನಾಲ್ಕು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ
ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯ ಖಾನಾಪುರ, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕಿನ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಜುಲೈ 31 ರಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಜು.31 ರಂದು ರಜೆ ಘೋಷಿಸಿರುವುದರಿಂದ ಈ ದಿನದ ಬದಲು ಬರುವ ಭಾನುವಾರ ಶಾಲೆಗಳನ್ನು ನಡೆಸುವ ಮೂಲಕ ಬೋಧನಾ ಅವಧಿಯನ್ನು ಸರಿದೂಗಿಸಿಕೊಳ್ಳಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.