ಚಿಕ್ಕೋಡಿ:ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಸಂಭವಿಸಿದೆ.
ಟ್ರ್ಯಾಕ್ಟರ್-ಬೈಕ್ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - undefined
ಟ್ರ್ಯಾಕ್ಟರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಟ್ರ್ಯಾಕ್ಟರ್-ಬೈಕ್ ಡಿಕ್ಕಿ ಸವಾರ ಸಾವು
ಬೈಕ್ ಸವಾರ ಕುಮಾರ್ ತಗಣೆ (25) ಸ್ಥಳದಲ್ಲಿ ಸಾವನ್ನಪ್ಪಿದ್ದು, ಹಿಂಬದಿ ಸವಾರ ಅಪ್ಪಾಸಾಬ ಜಡಗೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಇಬ್ಬರು ಕಾಗವಾಡ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.