ಕರ್ನಾಟಕ

karnataka

ETV Bharat / state

ಟ್ರ್ಯಾಕ್ಟರ್ ಪಲ್ಟಿ: ಆಸ್ಪತ್ರೆಗೆ ಸಾಗಿಸುವ ಮಧ್ಯೆ ಚಾಲಕ ಸಾವು - Belgavi latest crime news

ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಉಳಿಮೆ ಮಾಡುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಟ್ರ್ಯಾಕ್ಟರ್ ಚಾಲಕನೋರ್ವ ಸಾವನ್ನಪ್ಪಿದ್ದಾನೆ. ಗಣಪತಿಗಲ್ಲಿ ನಿವಾಸಿ ಸಾಗರ ಅತವಾಡಕರ (25) ಮೃತಪಟ್ಟ ಚಾಲಕ.

tractor driver died
ಟ್ರ್ಯಾಕ್ಟರ್ ಪಲ್ಟಿ: ಆಸ್ಪತ್ರೆಗೆ ಸಾಗಿಸುವ ಮಧ್ಯೆ ಚಾಲಕ ಸಾವು

By

Published : Jun 25, 2020, 11:11 PM IST

ಬೆಳಗಾವಿ: ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ನಡೆದಿದೆ.

ಸಾಗರ ಅತವಾಡಕರ (25) ಮೃತ ಚಾಲಕ
ತಾಲೂಕಿನ ಅಂಬೇವಾಡಿ ಗ್ರಾಮದ ಗಣಪತಿಗಲ್ಲಿ ನಿವಾಸಿ ಸಾಗರ ಅತವಾಡಕರ (25) ಮೃತಪಟ್ಟ ಚಾಲಕ. ಈತ ಇಂದು ಬೆಳಿಗ್ಗೆ ಉಳಿಮೆ ಮಾಡುವ ಸಂದರ್ಭದಲ್ಲಿ ಹೊಲದಲ್ಲಿನ ಬದಿಗೆ ಟ್ರ್ಯಾಕ್ಟರ್ ಹತ್ತಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡ ಈತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಕಾಕತಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು‌ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಬೆಳಗಾವಿ ಗ್ರಾಮೀಣ ಎಸಿಪಿ ಶಿವಾರೆಡ್ಡಿ, ಕಾಕತಿ ಠಾಣೆಯ ಸಿಪಿಐ ಶ್ರೀಶೈಲ ಕೌಜಲಗಿ ಹಾಗೂ ಪಿಎಸ್ಐ ಅವಿನಾಶ ಯರಗೊಪ್ಪ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.

ABOUT THE AUTHOR

...view details