ಬೆಳಗಾವಿ:ಕೊರೊನಾ ವೈರಸ್ ಹರಡದಂತೆ ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರ ಆದೇಶದ ಮೇರೆಗೆ ನಿನ್ನೆಯೇ ರೈಲ್ವೆ ಸಚಿವರು, ಅಧಿಕಾರಿಗಳ ಸಭೆ ನಡೆಸಿದ್ದರು. ದೇಶದಲ್ಲಿ 3700ಕ್ಕೂ ಹೆಚ್ಚಿನ ರೈಲುಗಳನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮಾಹಿತಿ ನೀಡಿದ್ದಾರೆ.
ಪ್ರತಿ ರೈಲ್ವೆ ಸ್ಟೇಷನ್ನಲ್ಲಿ ಥರ್ಮಲ್ ಸ್ಕ್ರೀನಿಂಗ್ ಟೆಸ್ಟ್ ಹೆಚ್ಚಿಸಲಾಗುವುದು. ಇನ್ನು ಜನಸಂದಣಿ ತಡೆಯುವ ನಿಟ್ಟಿನಲ್ಲಿ ಎಲ್ಲ ರೈಲ್ವೆ ಪ್ಲಾಟ್ ಫಾರ್ಮ್ಗಳ ದರವನ್ನು ಐವತ್ತು ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಎಂದು ಸಚಿವರು ತಿಳಿಸಿದರು.