ಕರ್ನಾಟಕ

karnataka

ETV Bharat / state

ಬೇರೆ ರಾಜ್ಯದ ವಲಸೆ ಕಾರ್ಮಿಕರನ್ನು ಕಳುಹಿಸಲು ರೈಲಿನ ವ್ಯವಸ್ಥೆಯಾಗಿದೆ: ಸುರೇಶ್​ ಅಂಗಡಿ

ಗೃಹ ಇಲಾಖೆ ಆದೇಶ ನೀಡಿದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸಲು ರೈಲಿನ ವ್ಯವಸ್ಥೆ ಮಾಡಲಾಗಿದೆ.

train system is ready to send workers to their state: suresh angadi
ವಲಸೆ ಕಾರ್ಮಿಕರನ್ನು ಅವರವರ ರಾಜ್ಯಕ್ಕೆ ಕಳುಹಿಸಲು ರೈಲಿನ ವ್ಯವಸ್ಥೆಯಾಗಿದೆ: ಸುರೇಶ್​ ಅಂಗಡಿ

By

Published : May 3, 2020, 4:42 PM IST

ಬೆಳಗಾವಿ:ವಲಸೆ ಕಾರ್ಮಿಕರಿಗೆ ಅವರವರ ರಾಜ್ಯಕ್ಕೆ ಕಳುಹಿಸಲು ರಾಜ್ಯ ಸರ್ಕಾರಗಳ ಬೇಡಿಕೆಗೆ ಅನುಗುಣವಾಗಿ ರೈಲಿನ ವ್ಯವಸ್ಥೆ ಮಾಡಲಾಗಿದೆ‌ ಎಂದು‌ ಕೇಂದ್ರ ಸಚಿವ ಸುರೇಶ್​ ಅಂಗಡಿ ತಿಳಿಸಿದರು.

ನಗರದಲ್ಲಿಂದು‌ ಮಾಧ್ಯಮದವರೊಂದಿಗೆ ಮಾತನಾಡಿದ ಸುರೇಶ್​​ ಅಂಗಡಿ, ಗೃಹ ಇಲಾಖೆ ಆದೇಶ ನೀಡಿದ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರನ್ನು ಅವರ ರಾಜ್ಯಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಇದನ್ನು ನೋಡಿಕೊಳ್ಳಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದ್ದು, ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಆಯಾ ರಾಜ್ಯಗಳು ಮಾಡಬೇಕು. ಇದಲ್ಲದೆ ಎರಡು ರಾಜ್ಯಗಳು ಸೇರಿಕೊಂಡು ಸಮನ್ವಯದ ಮೂಲಕ ಕಾರ್ಮಿಕರ ಪ್ರಯಾಣದ ಹಣವನ್ನು ರಾಜ್ಯ ಸರ್ಕಾರಗಳೇ ಭರಿಸಬೇಕು ಎಂದರು.

ಕೇಂದ್ರ ಸಚಿವ ಸುರೇಶ್​ ಅಂಗಡಿ

ಬೆಂಗಳೂರಿನಿಂದ ರಾಜಸ್ಥಾನಕ್ಕೆ ತೆರಳಲು 16 ಸಾವಿರ ಕಾರ್ಮಿಕರು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರೋ ಕಾರ್ಮಿಕರಿಗೆ ರಾಜ್ಯಕ್ಕೆ ಬರಲು ಅವಕಾಶ ಇಲ್ಲ. ನಿನ್ನೆ ನಡೆದ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಸಿಎಂ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಈ ಬಗ್ಗೆ ಸಂಪುಟದಲ್ಲಿ ಮತ್ತೊಮ್ಮೆ ಚರ್ಚೆ ನಡೆಯಲಿದೆ‌ ಎಂದು ತಿಳಿಸಿದರು.

ABOUT THE AUTHOR

...view details