ಕರ್ನಾಟಕ

karnataka

ETV Bharat / state

ಬೆಳಗಾವಿ: ತಲೆ ಮೇಲೆ ಪಾದರಕ್ಷೆ ಹೊತ್ತು ಸಾರಿಗೆ ಸಿಬ್ಬಂದಿ ಆಕ್ರೋಶ - belgavi transport staff protest

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಸುಮಾರು 1.30 ಲಕ್ಷ ಸಿಬ್ಬಂದಿ ಇದ್ದಾರೆ. ಅವರನ್ನು ಈ ಕೂಡಲೇ ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಆಗ್ರಹಿಸಿ ಹೋರಾಟ ನಡೆಯುತ್ತಿದೆ.

transport staff protest continued today in belgavi
ತಲೆ ಮೇಲೆ ಪಾದರಕ್ಷೆಗಳನ್ನೊತ್ತು ಆಕ್ರೋಶ ಹೊರಹಾಕುತ್ತಿರುವ ಸಾರಿಗೆ ನೌಕರರು

By

Published : Dec 12, 2020, 10:23 AM IST

Updated : Dec 12, 2020, 10:28 AM IST

ಬೆಳಗಾವಿ: ಸಾರಿಗೆ ನೌಕರರನ್ನು ಸರ್ಕಾರಿ ಖಾಯಂ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕೈಗೊಂಡಿರುವ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾರಿಗೆ ನೌಕರರು ತಮ್ಮ ತಲೆ ಮೇಲೆ ಪಾದರಕ್ಷೆಗಳನ್ನು ಹೊತ್ತು ವಿಭಿನ್ನ ರೀತಿಯಲ್ಲಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ತಲೆ ಮೇಲೆ ಪಾದರಕ್ಷೆ ಹೊತ್ತು ಸಾರಿಗೆ ಸಿಬ್ಬಂದಿ ಆಕ್ರೋಶ

ಓದಿ:ಮುಂದುವರೆದ ಸಾರಿಗೆ ನೌಕರರ ಮುಷ್ಕರ ; ಖಾಸಗಿ ಚಾಲಕ-ನಿರ್ವಾಹಕರ ಮೊರೆ ಹೋಗುತ್ತಾ ಸರ್ಕಾರ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಸುಮಾರು 1.30 ಲಕ್ಷ ಸಿಬ್ಬಂದಿ ಇದ್ದಾರೆ. ಪ್ರತಿದಿನ ರಾಜ್ಯದ ಶೇ.92 ರಷ್ಟು ಹಳ್ಳಿಗಳು ಹಾಗೂ ನೆರೆ ರಾಜ್ಯಗಳಿಗೆ ಅಂದಾಜು 25,000 ಬಸ್‌ಗಳಲ್ಲಿ 75 ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದೇವೆ. ಆದರೂ ರಾಜ್ಯ ಸರ್ಕಾರ ಮಾತ್ರ ನಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಿಲ್ಲ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ‌ಮುಂದುವರೆಸುವುದಾಗಿ ನೌಕರರು ಎಚ್ಚರಿಕೆ ನೀಡಿದ್ದಾರೆ.

Last Updated : Dec 12, 2020, 10:28 AM IST

ABOUT THE AUTHOR

...view details