ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಇಂದಿನಿಂದ ಬ್ಲ್ಯಾಕ್ ಫಂಗಸ್ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬ್ಲ್ಯಾಕ್ ಫಂಗಸ್ ಸೋಂಕಿತರು ಚಿಕಿತ್ಸೆಗೆ ಈ ಮೊದಲು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗುವಂತೆ ಸೂಚನೆ ನೀಡಲಾಗಿತ್ತು. ಆದರೀಗ ಸರ್ಕಾರದ ನಿರ್ದೇಶನದಂತೆ ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲೂ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.