ಬೆಳಗಾವಿ: ಕಳೆದ ಒಂದು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನ ಸಂಪೂರ್ಣ ನಲುಗಿ ಹೋಗಿದ್ದರು. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಪರಿಹಾರ ನೀಡದಿರುವುದನ್ನು ಯುವಕರು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ.
ನೆರೆ ಪರಿಹಾರ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ - ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್
ಕಳೆದ ಒಂದು ತಿಂಗಳ ಹಿಂದೆ ಉತ್ತರ ಕರ್ನಾಟಕದಲ್ಲಿ ಉಂಟಾದ ಭೀಕರ ಪ್ರವಾಹಕ್ಕೆ ಜನ ಸಂಪೂರ್ಣ ನಲುಗಿ ಹೋಗಿದ್ದರು. ಇಲ್ಲಿಯವರೆಗೂ ಕೇಂದ್ರ ಸರ್ಕಾರ ಪರಿಹಾರ ನೀಡದಿರುವುದನ್ನು ಯುವಕರು ಖಂಡಿಸಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡುತ್ತಿದ್ದಾರೆ.
ರಾಜಕೀಯ ಬಿಟ್ಟಾಕಿ, ಪ್ರವಾಹ ಪರಿಹಾರ ನೀಡಿ. ನರೇಂದ್ರ ಮೋದಿಯವರೇ ಕರ್ನಾಟಕಕ್ಕೆ ಪರಿಹಾರ ನೀಡಿ. "ಉತ್ತರ ಕರ್ನಾಟಕ ಉಳಿಸಿ" ಎಂಬ ಹ್ಯಾಶ್ ಟ್ಯಾಗ್ನೊಂದಿಗೆ ಫೇಸ್ಬುಕ್ ಹಾಗೂ ಟ್ವಿಟರ್ನಲ್ಲಿ ಟ್ರೆಂಡ್ ಶುರು ಮಾಡಲಾಗಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರವಾಹ ಉಂಟಾಗಿತ್ತು. ಲಕ್ಷಾಂತರ ಜನ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಇಲ್ಲಿಯವರೆಗೂ ಸರ್ಕಾರ ಬೆಳೆ ಪರಿಹಾರ ನೀಡಿಲ್ಲ. ಇದರಿಂದ ಕಂಗಾಲಾದ ರೈತರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಪ್ರವಾಹ ಪರಿಹಾರ ನೀಡಬೇಕು. ಜೊತೆಗೆ ಉತ್ತರ ಕರ್ನಾಟಕವನ್ನು ಸರ್ಕಾರ ಕಡೆಗಣಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಸರ್ಕಾರಕ್ಕೆ ಸರಿಯಾದ ಪಾಠ ಕಲಿಸುತ್ತೇವೆ ಎಂದು ಅನೇಕ ಯುವಕರು ಟ್ವಿಟರ್ ಟ್ರೆಂಡ್ ಶುರು ಮಾಡಿದ್ದಾರೆ.