ಬೆಳಗಾವಿ:ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಬಿದ್ದ ಘಟನೆ ಬೆಳಗಾವಿ ಹೊರವಲಯದ ಕಾಕತಿ ಸಮೀಪ ಸಂಭವಿಸಿದೆ.
ಟೈರ್ ಸ್ಫೋಟಿಸಿ ಕೆರೆಗುರುಳಿದ ಕಾರು:ನಾಲ್ವರು ಪ್ರಾಣಾಪಾಯದಿಂದ ಪಾರು - Kannada news
ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಯೊಳಗೆ ಬಿದ್ದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟೈರ್ ಬ್ಲಾಸ್ಟ್ ಆಗಿ ಕೆರೆಯಲ್ಲಿ ಬಿದ್ದ ಕಾರು
ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ ಆಗಿದೆ. ಪರಿಣಾಮ,ವೇಗದ ರಭಸಕ್ಕೆ ಕಾರು ರಸ್ತೆ ವಿಭಜಕಕ್ಕೆ ಗುದ್ದಿದೆ. ಬಳಿಕ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಕೆರೆಯೊಳಗೆ ನುಗ್ಗಿದೆ. ಈ ವೇಳೆ ಕಾರಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು,ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರ್ಘಟನೆಯಲ್ಲಿ ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.