ಕರ್ನಾಟಕ

karnataka

ETV Bharat / state

ಗಾಂಜಾ ಮಾರಾಟ: ಚಿಕ್ಕೋಡಿಯಲ್ಲಿ ಇಬ್ಬರ ಬಂಧನ - chikkodi Illegal sale ganja news

ನಿಪ್ಪಾಣಿ ನಗರದ ಸೇರಿದಂತೆ ಇತರೆ ಕಡೆಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು‌ ಖದೀಮರನ್ನು ನಿಪ್ಪಾಣಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

arrest
arrest

By

Published : Oct 6, 2021, 2:22 PM IST

ಚಿಕ್ಕೋಡಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು‌ ಖದೀಮರನ್ನು ನಿಪ್ಪಾಣಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗೋಕಾಕ್​ ತಾಲೂಕಿನ ಮಲ್ಲಿಕ್ ಹಾಗೂ ದಸ್ತಗಿರಸಾಬ್ ಶೇಖ್ ಬಂಧಿತರು. ಇನ್ನೋರ್ವ ಆರೋಪಿ ಅರ್ಬಾಜ್ ಇಸ್ಮಾಯಿಲ್ ಶಹಾಬಾಜ ಎಂಬಾತ ಪರಾರಿಯಾಗಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತರು ಕಳೆದ ಹಲವು ತಿಂಗಳಿನಿಂದ ನಿಪ್ಪಾಣಿ ನಗರದ ಸೇರಿದಂತೆ ಇತರೆ ಕಡೆಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ನಿಪ್ಪಾಣಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ, 1 ಕೆಜಿ180 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಈ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

ABOUT THE AUTHOR

...view details