ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಇಬ್ಬರು ಕೊರೊನಾ ಸೋಂಕಿತ ಮಹಿಳೆಯರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್​ - ಬೆಳಗಾವಿ ಲೆಟೆಸ್ಟ್​ ಕೊರೊನಾ ವರದಿ

ಬೆಳಗಾವಿಯಲ್ಲಿ ಕೊರೊನಾ ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

Two Corona-infected women cured in Belgaum
ಬೆಳಗಾವಿಯ ಇಬ್ಬರು ಮಹಿಳೆಯರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್..

By

Published : Apr 30, 2020, 5:52 PM IST

Updated : Apr 30, 2020, 6:44 PM IST

ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಇಬ್ಬರು ಮಹಿಳೆಯರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಇಬ್ಬರು ಕೊರೊನಾ ಸೋಂಕಿತ ಮಹಿಳೆಯರು ಗುಣಮುಖ


ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಡಚಿಯ 67 ವರ್ಷದ (ಪಿ-149) ಮತ್ತು 36 ವರ್ಷದ (ಪಿ-147) ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.


ಇವರು ಕ್ರಮವಾಗಿ ಏ. 1 ಹಾಗೂ ಮಾ. 31ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಜಿಲ್ಲೆಯಲ್ಲಿ ಇಂದಿನವರೆಗೆ ಒಟ್ಟು 69 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದೀಗ ಒಟ್ಟಾರೆ 10 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.

Last Updated : Apr 30, 2020, 6:44 PM IST

ABOUT THE AUTHOR

...view details