ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಕಿಲ್ಲರ್​ ಕೊರೊನಾಗೆ ಮತ್ತಿಬ್ಬರು ಬಲಿ‌: ಮೃತರ ಸಂಖ್ಯೆ 6ಕ್ಕೆ ಏರಿಕೆ - Belagavi corona latest news

ಕೊರೊನಾಗೆ ಬೆಳಗಾವಿಯಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.

Belagavi
Belagavi

By

Published : Jul 5, 2020, 11:42 AM IST

ಬೆಳಗಾವಿ:ಮಹಾಮಾರಿ ಕೊರೊನಾಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಇಬ್ಬರು ಬಲಿಯಾಗಿದ್ದು, ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 6 ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟ ಸಮಸ್ಯೆ ಹಾಗೂ ಜ್ವರದಿಂದ ಬಳಲುತ್ತಿದ್ದ ಈ ಇಬ್ಬರು ಸೋಂಕಿತರು ಜಿಲ್ಲಾಸ್ಪತ್ರೆಯ ಕೋವಿಡ್ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಇಂದು ಚಿಕಿತ್ಸೆ ಫಲಿಸದೇ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ರಾಯಬಾಗ ತಾಲೂಕು ಕುಡಚಿ ಪಟ್ಟಣದ 70 ವರ್ಷದ ವೃದ್ಧ ಹಾಗೂ ಬೆಳಗಾವಿಯ ವೀರಭದ್ರ ನಗರದ 48 ವರ್ಷದ ವ್ಯಕ್ತಿ ಎಂದು ತಿಳಿದುಬಂದಿದೆ. ಈ ಇಬ್ಬರ ಕೋವಿಡ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಖಚಿತ ಪಡಿಸಿವೆ.

ಬೆಳಗಾವಿ ‌ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ವೃದ್ಧೆ, ಅಥಣಿ ತಾಲೂಕಿನ ಇಬ್ಬರು, ಬೆಳಗಾವಿ ನಗರದ ಇಬ್ಬರು ಹಾಗೂ ರಾಯಬಾಗ ಪಟ್ಟಣದ ಓರ್ವ ವೃದ್ಧ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ABOUT THE AUTHOR

...view details