ಬೆಳಗಾವಿ: ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಗಣೇಬೈಲ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ. ಸುರೇಶ್ ಪಾಂಡುರಂಗ ತೋಪಿಂಕಟ್ಟಿ (25), ಗಣೇಶ್ ವಿಠ್ಠಲ್ ಬಾಮನೆ (22) ಸ್ಥಳದಲ್ಲೇ ಮೃತಪಟ್ಟವರು.
ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ, ಓರ್ವನ ಸ್ಥಿತಿ ಗಂಭೀರ - Two died in road accident at Belagavi
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಣೇಬೈಲ ಗ್ರಾಮದಲ್ಲಿ ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.
ಬೆಳಗಾವಿ
ಗಣೇಬೈಲ ಗ್ರಾಮದ ನಿವಾಸಿಗಳಾಗಿರುವ ಈ ಮೂವರು ಒಂದೇ ಬೈಕ್ ಮೇಲೆ ತೆರಳುತ್ತಿದ್ದರು. ಸವಾರನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಈ ವೇಳೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೋರ್ವ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ದೆಹಲಿಯ ಬೃಹತ್ ಕಟ್ಟಡದಲ್ಲಿ ಬೆಂಕಿ: 26 ಮಂದಿ ಸಾವು, ಅನೇಕರ ಸ್ಥಿತಿ ಗಂಭೀರ