ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಮಹಿಳೆ ಸೇರಿದಂತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಬೆಳಗಾವಿಯಲ್ಲಿ ಮತ್ತಿಬ್ಬರು ಕೊರೊನಾ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್ - belgavi latest news
ಬೆಳಗಾವಿ ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಮತ್ತಿಬ್ಬರು ಕೊರೊನಾ ಸೋಂಕಿತರು ಗುಣಮುಖ
ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಇಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.
ತಬ್ಲಿಘಿಯೊಂದಿಗೆ ಸಂಪರ್ಕ ಹೊಂದಿದ್ದ ಪಿ-575 ಹಾಗೂ ಪಿ-576 ಇವರಿಗೆ ಸೋಂಕು ದೃಢಪಟ್ಟಿತ್ತು. ಇಬ್ಬರಿಗೂ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.