ಚಿಕ್ಕೋಡಿ: ಕರ್ನಾಟಕ-ಮಹಾರಾಷ್ಟ್ರದ ಎರಡೂ ಭಾಷೆಯ ಜನ ಅನ್ಯೋನ್ಯತೆಯಿಂದ ಇದ್ದಾರೆ. ಉದ್ಧವ್ ಠಾಕ್ರೆ ಹಗಲು ಕನಸು ಕಾಣುತ್ತಿರುವ ಪರಿಣಾಮ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಕಿಡಿ ಕಾರಿದ್ದಾರೆ.
ಸೊಲ್ಲಾಪುರ, ಮುಂಬೈ ಕರ್ನಾಟಕಕ್ಕೆ ಸೇರಿದ್ದು ಅಂತ ನಾವೂ ಹೇಳ್ತೀವಿ; ಸಚಿವೆ ಶಶಿಕಲಾ ಜೊಲ್ಲೆ - Shashikala Jolle
ಬೆಳಗಾವಿ ನಮಗೆ ಸೇರಬೇಕು ಎಂಬ ಉದ್ಧವ್ ಠಾಕ್ರೆ ಹೇಳಿಕೆ ಮೂರ್ಖತನದ್ದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ಧವ್ ವಿರುದ್ಧ ಸಚಿವೆ ಶಶಿಕಲಾ ಜೊಲ್ಲೆ ಕಿಡಿ
ನಿಪ್ಪಾಣಿ ನಗರದಲ್ಲಿ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಹಾಗೂ ವಸತಿ ಗೃಹಗಳ ಉದ್ಘಾಟನಾ ಸಮಾರಂಭದ ನಂತರ ಮಾತನಾಡಿದ ಜೊಲ್ಲೆ, ಉದ್ಧವ್ ಠಾಕ್ರೆ ಎರಡು ಬಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಸೊಲ್ಲಾಪುರ, ಮುಂಬೈ ನಮ್ಮ ಕರ್ನಾಟಕಕ್ಕೆ ಸೇರಿದ್ದು ಎಂದು ಹೇಳಬಹುದು. ಭಾಷಾವಾರು ಪ್ರಾಂತ್ಯಗಳ ರಚನೆಯನ್ನು ಅತ್ಯಂತ ಸೂಕ್ತವಾಗಿ ಮಾಡಲಾಗಿದೆ. ಆದರೂ ರಾಜಕೀಯ ಲಾಭಕ್ಕಾಗಿ ಈ ರೀತಿಯ ಹೇಳಿಕೆಗಳನ್ನ ಠಾಕ್ರೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬೆಳಗಾವಿಯನ್ನ ಬಿಟ್ಟು ಕೊಡುವುದಿಲ್ಲ ಎಂದಿದ್ದಾರೆ.