ಬೆಳಗಾವಿ :ಸಚಿವ ಉಮೇಶ್ ಕತ್ತಿ ಒಡೆತನದ ಸಕ್ಕರೆ ಕಾರ್ಖಾನೆ ಸಿಬ್ಬಂದಿ ಗೂಂಡಾವರ್ತನೆ ತೋರಿರುವ ಆರೋಪ ಕೇಳಿ ಬಂದಿದೆ.
ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿರುವ ಸಚಿವ ಉಮೇಶ್ ಕತ್ತಿ ಒಡೆತನದ ವಿಶ್ವರಾಜ್ ಕತ್ತಿ ಕಾರ್ಖಾನೆ ಸಿಬ್ಬಂದಿ ಕಬ್ಬು ಸಾಗಿಸುವ ಟ್ರ್ಯಾಕ್ಟರ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಗೂಂಡಾವರ್ತನೆ ತೋರಿದ್ದಾರೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.