ಕರ್ನಾಟಕ

karnataka

ETV Bharat / state

ಬೆಳಗಾವಿ: ಎರಡು ಪ್ರತ್ಯೇಕ ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ 72 ಲಕ್ಷ ರೂ. ಪೊಲೀಸರ ವಶಕ್ಕೆ - ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷ 30 ಸಾವಿರ

ಕಾಗವಾಡ ಗಡಿಯಲ್ಲಿ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

undocumented-money-seized-in-belagavi
ಬೆಳಗಾವಿ: ಎರಡು ಪ್ರತ್ಯೇಕ ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ 72 ಲಕ್ಷ ಪೊಲೀಸರ ವಶಕ್ಕೆ

By

Published : Mar 29, 2023, 10:37 PM IST

ಚಿಕ್ಕೋಡಿ(ಬೆಳಗಾವಿ): ಕರ್ನಾಟಕ ವಿಧಾನಸಭೆ 2023ರ ಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಇಂದಿನಿಂದ ನೀತಿ ಸಂಹಿತೆ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಚೆಕ್​ ಪೋಸ್ಟ್​​ಗಳಲ್ಲಿ ಪೊಲೀಸರು ಫುಲ್​ ಅಲರ್ಟ್ ಆಗಿದ್ದಾರೆ. ಇದರ ನಡುವೆ ರಾಜ್ಯದ ಹಲವು ಚೆಕ್​ ಪೋಸ್ಟ್​​ಗಳಲ್ಲಿ ಅಕ್ರಮವಾಗಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ಮತ್ತು ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸದ್ಯ ಬೆಳಗಾವಿ ಜಿಲ್ಲೆಯ ಕಾಗವಾಡ ಗಡಿಯಲ್ಲಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುತ್ತಿರುವ ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 70 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹಣಕ್ಕೆ ಸಂಬಂಧಿಸಿದಂತೆ ಕಾರಿನ ಚಾಲಕರ ಹತ್ತಿರ ಯಾವುದೇ ದಾಖಲೆಗಳು ಇಲ್ಲದೆ ಕಾರಣ ಹೆಚ್ಚಿನ ತನಿಖೆ ಕಾಗವಾಡ ಪೊಲೀಸರು ಇಬ್ಬರನ್ನೂ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೊಂದೆಡೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2 ಲಕ್ಷ 30 ಸಾವಿರ ಹಣವನ್ನು ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ದಾವಣಗೆರೆ: ₹7 ಲಕ್ಷ ಮೌಲ್ಯದ ಅಡುಗೆ ಸಲಕರಣೆ ವಶಕ್ಕೆ

ಹಾವೇರಿ ಜಿಲ್ಲೆಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 19 ಲಕ್ಷ ರೂ ವಶ:ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಘಟನೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 19 ಲಕ್ಷದ 19 ಸಾವಿರ ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ದಾಖಲೆ ಇಲ್ಲದೆ ಸಾಗಿಸುತ್ತಿದ್ದ 16 ಲಕ್ಷ 24 ಸಾವಿರ ರೂಪಾಯಿ ಹಣವನ್ನು ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪೊಲೀಸರು ಮತ್ತು 2 ಲಕ್ಷ 95 ಸಾವಿರ ರೂಪಾಯಿ ಹಣವನ್ನು ಹಾನಗಲ್ ಪೊಲೀಸರು ವಶಕ್ಕೆ ಪಡೆದಿದ್ದರು. ಮೊದಲನೇ ಪ್ರಕರಣದಲ್ಲಿ, 19 ಲಕ್ಷ 19 ಸಾವಿರ ರೂಪಾಯಿಗೆ ಸಂಬಂಧಪಟ್ಟಂತೆ ಬಂಕಾಪುರ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 48 ರ ಟೋಲ್ ನಾಕಾ ಬಳಿ ಪೊಲೀಸರು ಟೋಲ್ ನಾಕಾದಲ್ಲಿ ಕಾರು ಪರಿಶೀಲನೆ ನಡೆಸಿದಾಗ ಈ ದಾಖಲೆ ಇಲ್ಲದ ಹಣ ಪತ್ತೆಯಾಗಿತ್ತು. ಅಕ್ರಮ ಹಣ ಸಾಗಾಣಿಕೆ ತಡೆಗಟ್ಟಲು ಪೊಲೀಸರು ಸ್ಥಾಪಿಸಿರುವ ಚೆಕ್ ಪೋಸ್ಟ್‌ನಲ್ಲಿನ ಸಿಬ್ಬಂದಿ ಈ ಹಣ ಪತ್ತೆ ಹಚ್ಚಿದ್ದರು.

ಇದನ್ನೂ ಓದಿ:ಚುನಾವಣೆ ಆಮಿಷ.. ಅಕ್ರಮವಾಗಿ ಸಾಗಿಸುತ್ತಿದ್ದ 60 ಲಕ್ಷ ಮೌಲ್ಯದ ಇಸ್ತ್ರಿ ಪೆಟ್ಟಿಗೆಗಳು ಜಪ್ತಿ

ಇನ್ನು ಆರೋಪಿಗಳು ಹಾವೇರಿ ನಗರದ ಕೊಂಡವಾಡಗದ ನಿವಾಸಿ ನಟರಾಜ್ ಬಾಳಿಮಠ ಮತ್ತು ಶ್ರೀಕಂಠಯ್ಯ ಬಾಳಿಮಠ ಎಂಬುವವರಾಗಿದ್ದರು. ಮಾರುತಿ ಸುಜುಕಿ ಕಾರ್‌ನಲ್ಲಿ ಹಣ ಸಾಗಿಸುತ್ತಿದ್ದರು. ಅಕ್ರಮ ಹಣ ಕೊಂಡೊಯ್ಯುತ್ತಿದ್ದ ಕಾರು ಶಿಗ್ಗಾಂವಿ ಕಡೆಯಿಂದ ಹಾವೇರಿ ಕಡೆ ಸಂಚರಿಸುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರ ಮೇಲೆ ದೂರು ದಾಖಲಿಸಿಕೊಂಡಿರುವ ಬಂಕಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ನೆಲಮಂಗಲ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 20 ಲಕ್ಷ , ಬೆಳ್ಳಿ ವಸ್ತು, ಸೀರೆ ವಶ

ABOUT THE AUTHOR

...view details