ಬೆಳಗಾವಿ: ಕೊರೊನಾ ಉಲ್ಬಣ ಹಿನ್ನೆಲೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವರು ಮೂರು ಗಂಟೆಗೆ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಏನು ನಿರ್ಣಯ ಆಗುತ್ತದೋ ಅದನ್ನು ರಾಜ್ಯದಲ್ಲಿ ಅನ್ವಯ ಮಾಡಲಾಗುವುದು ಎಂದು ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.
3 ಗಂಟೆಗೆ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಇಲಾಖೆ ಸಭೆ: ಕೆ ಸುಧಾಕರ - ಕೇಂದ್ರ ಸರ್ಕಾರದ ಮಾರ್ಗಸೂಚಿ
ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಿದ್ದು, ಎರಡೂ ಒಂದೇ ರೀತಿಯಾಗಿವೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಲಾಗುವುದು ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಿದ್ದಾರೆ. ಎರಡು ಒಂದೇ ರೀತಿಯಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಲಾಗುವುದು. ಇವತ್ತು ಮೂರು ಗಂಟೆಗೆ ಎಲ್ಲ ರಾಜ್ಯದ ಆರೋಗ್ಯ ಸಚಿವರ ವಿಡಿಯೋ ಸಂವಾದ ಇರುವುದರಿಂದ ಆ ಸಭೆಯಲ್ಲಿ ಏನು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂಬುದನ್ನು ತಿಳಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಕೋವಿಡ್ ಪ್ರಕರಣಗಳ ಹೆಚ್ಚಳ: ಆರೋಗ್ಯ ಸಚಿವರೊಂದಿಗೆ ಇಂದು ಮಾಂಡವಿಯಾ ಸಭೆ