ಕರ್ನಾಟಕ

karnataka

ETV Bharat / state

ಸ್ವಾರ್ಥದ ಅಂಧಕಾರದಲ್ಲಿ ಸವದಿ, ಶೆಟ್ಟರ್ ಪಕ್ಷ ಬಿಟ್ಟು ಹೋಗಿದ್ದಾರೆ: ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಟೀಕೆ - ನಿಪ್ಪಾಣಿ ಮತಕ್ಷೇತ್ರ

ನಮ್ಮ ಪಕ್ಷ ಬಿಟ್ಟು ಹೋಗಿರುವ ಲಕ್ಷ್ಮಣ್ ಸವದಿ ಹಾಗೂ ಜಗದೀಶ್ ಶೆಟ್ಟರ್ ಅವರಿಗೆ ಜನರು ಸೂಕ್ತ ಪಾಠ ಕಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

By

Published : Apr 20, 2023, 7:11 PM IST

Updated : Apr 20, 2023, 8:28 PM IST

ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ

ಚಿಕ್ಕೋಡಿ:ನಮ್ಮ ಪಾರ್ಟಿ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಅವರಿಗೆ ಶಕ್ತಿ ತುಂಬಿತ್ತು. ಆದರೆ, ಅವರ ದುರ್ದೈವದಿಂದ ನಮ್ಮ ಪಕ್ಷವನ್ನು ಬಿಟ್ಟು ಹೋಗಿದ್ದಾರೆ. ನರೇಂದ್ರ ಮೋದಿ ಅಂತಹ ನಾಯಕತ್ವದ ಪಕ್ಷ ಬಿಟ್ಟು ಹೋಗಿದ್ದಾರೆ. ಜನರು ಅವರಿಗೆ ಸೂಕ್ತ ಪಾಠ ಕಲಿಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಆಕ್ರೋಶ ವ್ಯಕ್ತಪಡಿಸಿದರು. ಅವರು ನಿಪ್ಪಾಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಅವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ, ನಾವು ಲಕ್ಷ್ಮಣ್ ಸವದಿಯವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಿದ್ದೇವೆ. ಆದರೂ ಇದನ್ನೆಲ್ಲ ಅವರು ಪರಿಗಣನೆಗೆ ತೆಗೆದುಕೊಳ್ಳದೇ ಪಕ್ಷವನ್ನು ಬಿಟ್ಟು ಹೋಗಿದ್ದಾರೆ. ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಡಿ. ಕೆ ಶಿವಕುಮಾರ್ ವಿರುದ್ಧದ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಚುನಾವಣೆಯಲ್ಲಿ ಜನರು ಅವರನ್ನು ಕಟ್ಟಿ ಹಾಕುತ್ತಾರೆ:ಯಾರ್ಯಾರು ಪಾರ್ಟಿ ಬಿಟ್ಟು ಹೋಗಿದ್ದಾರೆ. ಅವರು ಜನರಿಗೆ ಏನು ಹೇಳುತ್ತಾರೆ. ಜನರಿಗೆ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುತ್ತೇವೆ ಎಂದು ಹೇಳುತ್ತಾರಾ? ತಮ್ಮ ಸ್ವಾರ್ಥದ ಅಂಧಕಾರದಲ್ಲಿ ಅವರಿಗೆ ಏನು ಅರ್ಥ ಆಗುತ್ತಿಲ್ಲ. ಈ ಚುನಾವಣೆಯಲ್ಲಿ ಜನರು ಅವರನ್ನು ಕಟ್ಟಿ ಹಾಕುತ್ತಾರೆ ಎಂದು ಸವದಿ ಶೆಟ್ಟರ್ ವಿರುದ್ಧ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ನಾಳೆ ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ಶೋ: ಬಿಜೆಪಿ ಚಾಣಕ್ಯನ ಬತ್ತಳಿಕೆಯಲ್ಲಿರುವ ಅಸ್ತ್ರಗಳೇನು?

ನಿಪ್ಪಾಣಿಯಲ್ಲಿ ಶಶಿಕಲಾ ಜೊಲ್ಲೆ ನಾಮಪತ್ರ ಸಲ್ಲಿಕೆ: ನಿಪ್ಪಾಣಿ ಮತಕ್ಷೇತ್ರ ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಅವರು ಇವತ್ತು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರ ಜೊತೆಯಾಗಿ ನಾಮಪತ್ರ ಸಲ್ಲಿಸಿದರು. ಕಳೆದ 2008 ರಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಸೋತು 2013 ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಾಕಾ ಸಾಹೇಬ್ ವಿರುದ್ಧ ಗೆಲುವು ಸಾಧಿಸಿ ಮತ್ತೆ 2018 ರಲ್ಲೂ ತಮ್ಮ ಗೆಲುವಿನ ವೋಟು ಮುಂದುವರೆಸುತ್ತಾರೆ. ಸದ್ಯ ನಾಲ್ಕನೇ ಬಾರಿಗೆ ಮತ್ತೆ ಶಶಿಕಲಾ ಜೊಲ್ಲೆ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಬಾರಿ ಗೆಲುವು ಸಾಧಿಸಿದರೆ ಹ್ಯಾಟ್ರಿಕ್ ಗೆಲುವು ಸಾಧಿಸುತ್ತಾರೆ.

ಇದನ್ನೂ ಓದಿ:ಬಿಜೆಪಿಯ ಅಚ್ಚರಿ ಆಯ್ಕೆಯ ಪರಿಣಾಮ: 23 ಹಾಲಿ ಶಾಸಕರ ಕ್ಷೇತ್ರಗಳಲ್ಲಿ 7 ಕಡೆ ಬಂಡಾಯ

ಶಶಿಕಲಾ ಜೊಲ್ಲೆ ಬೃಹತ್ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ನಂತರ ಸಚಿವೆ ಶಶಿಕಲಾ ಜೊಲ್ಲೆ ಬೃಹತ್ ಶಕ್ತಿ ಪ್ರದರ್ಶನ ನಡೆಸಿದರು. ನಿಪ್ಪಾಣಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ರೋಡ್ ಶೋ ಸಮಾವೇಶ ನಡೆಸಿದರು. ನಂತರ ಮುನಿಸಿಪಲ್ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶ ನಡೆಸಲಾಯಿತು.

ಇದನ್ನೂ ಓದಿ :ಬೃಹತ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ

Last Updated : Apr 20, 2023, 8:28 PM IST

ABOUT THE AUTHOR

...view details