ಬೆಳಗಾವಿ:ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಜಿಲ್ಲೆಯ ಕಪಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಸುರೇಶ್ ಅಂಗಡಿ ಪತ್ನಿಯೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಶಿವಲಿಂಗನಿಗೆ ರುದ್ರಾಭಿಷೇಕ ಸೇವೆ ಮಾಡಿದ್ದಾರೆ.
ಮಹಾಶಿವರಾತ್ರಿ ಹಿನ್ನೆಲೆ ಕಪಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಸುರೇಶ್ ಅಂಗಡಿ ಭೇಟಿ...ವಿಶೇಷ ಪೂಜೆ... - Union minister Suresh kumar visits to kapileshwara temple in Belgavi
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೆಳಗಾವಿಯ ಕಪಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಸುರೇಶ್ ಅಂಗಡಿ ಪತ್ನಿಯೊಂದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿ, ಶಿವಲಿಂಗನಿಗೆ ರುದ್ರಾಭಿಷೇಕ ಸೇವೆ ಮಾಡಿದ್ದಾರೆ.
![ಮಹಾಶಿವರಾತ್ರಿ ಹಿನ್ನೆಲೆ ಕಪಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಸುರೇಶ್ ಅಂಗಡಿ ಭೇಟಿ...ವಿಶೇಷ ಪೂಜೆ... r Suresh kumar visits to kapileshwara temple in Belgavi](https://etvbharatimages.akamaized.net/etvbharat/prod-images/768-512-6148415-thumbnail-3x2-sanju.jpg)
ಕೇಂದ್ರ ಸಚಿವ ಸುರೇಶ್ ಅಂಗಡಿ
ಮಹಾಶಿವರಾತ್ರಿ ಹಿನ್ನೆಲೆ ಕಪಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ಸುರೇಶ್ ಅಂಗಡಿ ಭೇಟಿ..ವಿಶೇಷ ಪೂಜೆ
ಕುಂದಾನಗರಿ ಬೆಳಗಾವಿಯಲ್ಲಿ ಶ್ರದ್ಧಾ, ಭಕ್ತಿಯಿಂದ ಮಹಾಶಿವರಾತ್ರಿ ಆಚರಿಸಲಾಗುತ್ತಿದೆ. ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ಪುರಾತನ ಕಾಲದ ಕಪಿಲೇಶ್ವರ ದೇವಸ್ಥಾನಕ್ಕೆ ಭಕ್ತರ ದಂಡು ಆಗಮಿಸುತ್ತಿದೆ.
ಕಪಿಲೇಶ್ವರ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ವಿಶೇಷ ಪೂಜೆ, ಅಭಿಷೇಕ ಮಾಡಿಸಲಾಗುತ್ತಿದೆ. ಸಾವಿರಾರು ಭಕ್ತರು ಸಾಲುಗಟ್ಟಿ ದರ್ಶನ ಪಡೆಯುತ್ತಿದ್ದಾರೆ. ಬಿಲ್ವಪತ್ರೆ, ತೆಂಗಿನಕಾಯಿ, ಹೂವು, ಕರ್ಪೂರ ಸಮೇತ ದೇವಸ್ಥಾನಕ್ಕೆ ಭಕ್ತರು ಆಗಮಿಸಿ ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಮಧ್ಯರಾತ್ರಿ 12 ಗಂಟೆಯಿಂದಲೇ ಶಿವಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.