ಚಿಕ್ಕೋಡಿ :ನಿಪ್ಪಾಣಿ - ಮುಧೋಳ ಹೆದ್ದಾರಿ ಪಕ್ಕ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಸುಮಾರು 38 ವಯಸ್ಸಿನ ಆಸುಪಾಸಿನ ವ್ಯಕ್ತಿಯ ಶವ ಇದಾಗಿದೆ ಎಂದು ತಿಳಿದು ಬಂದಿದೆ.
ಅಪರಿಚಿತ ವ್ಯಕ್ತಿಯ ಶವ ಪತ್ತೆ: ಕೊಲೆ ಶಂಕೆ - ಚಿಕ್ಕೋಡಿ
ವ್ಯಕ್ತಿಯೊಬ್ಬರನ್ನು ಬೇರೆಲ್ಲೋ ಕೊಲೆ ಮಾಡಿ ಹೆದ್ದಾರಿ ಪಕ್ಕ ತಂದು ಬಿಸಾಕಿರುವ ಘಟನೆ ಚಿಕ್ಕೋಡಿಯಲ್ಲಿ ಕಂಡು ಬಂದಿದೆ.
ವ್ಯಕ್ತಿಯ ಶವ ಪತ್ತೆ
ವ್ಯಕ್ತಿಯನ್ನು ಬೇರೆ ಎಲ್ಲೋ ಬರ್ಬರವಾಗಿ ಕೊಲೆ ಮಾಡಿ ಇಲ್ಲಿ ತಂದು ಎಸೆದಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮುಖದ ಮೆಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.