ಚಿಕ್ಕೋಡಿ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪರಿಚಿತ ಮಹಿಳೆ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರಕ್ಕೆ ಹೋಗುವ ರಸ್ತೆಯ ಎಲಿಮೂನೊಳ್ಳಿ ಕ್ರಾಸ್ ಬಳಿ ಸಂಭವಿಸಿದೆ.
ಸಂಕೇಶ್ವರ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ಸಾವು
ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಎಲಿಮೂನೊಳ್ಳಿ ಕ್ರಾಸ್ ಬಳಿ ಅಪರಿಚಿತ ವಾಹನವೊಂದು ಮಹಿಳೆಯೋರ್ವಳಿಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾಳೆ.
woman killed by unknown vehicle
ಯಾರೋ ವಾಹನ ಸವಾರರು ಮಹಿಳೆಗೆ ಡಿಕ್ಕಿ ಹೊಡೆದುಕೊಂಡು ಹೋಗಿದ್ದು ಆಕೆ ಸ್ಥಳದಲ್ಲಿಯೇ ಸಾವನಪ್ಪಿದ್ದಾಳೆ. ಇನ್ನು ಮಹಿಳೆ ದಟ್ಟವಾದ ಕೂದಲು ಹೊಂದಿದ್ದು ಸುಮಾರು 55 ರಿಂದ 58 ವಯಸ್ಸಿನ ಮಹಿಳೆ ಎಂದು ತಿಳಿದು ಬಂದಿದೆ.
ಈ ಘಟನೆ ಹುಕ್ಕೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.