ಚಿಕ್ಕೋಡಿ :ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ನಡೆದಿದೆ.
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಅಥಣಿ ತಾಲೂಕಿನ ಸಂಬರಗಿ ಗ್ರಾಮ
ಅಥಣಿ ತಾಲೂಕಲ್ಲಿ ವ್ಯಕ್ತಿವೋರ್ವನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ಮಾಡಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಶವ ಪತ್ತೆ
ಸಂಬರಗಿ ಗ್ರಾಮದ ಅಗ್ರಾಣಿ ಪಕ್ಕದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಮಾರಣಾಂತಿಕ ಹಲ್ಲೆ ಮಾಡಿ ಬಾವಿಯಲ್ಲಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೆಡೆದಿದೆ.