ಬೆಳಗಾವಿ: ಮಳೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಬೇಕು ಮತ್ತು 25 ಸಾವಿರ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸುವಂತೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದರು.
ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದ ಆಗಿರುವ ಹಾನಿಯನ್ನು ವೀಕ್ಷಿಸಲು ಪ್ರಧಾನಿ ಮೋದಿಯವರು ಬರಬೇಕು. ಇಲ್ಲಿನ ಸ್ಥಿತಿಗತಿಗಳ ಕುರಿತು ಅವಲೋಕಿಸಿ, ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಧಾನಿ ಮೋದಿ ಭೇಟಿಗೆ ವಾಟಾಳ್ ನಾಗರಾಜ್ ಒತ್ತಾಯ ಮಳೆಯಿಂದ ಸಾವಿರಾರು ರೂಪಾಯಿ ನಷ್ಟವಾಗಿದೆ. ಕೇಂದ್ರ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಲ್ಲ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದರೆ, ಪ್ರಧಾನಿ ಮೋದಿ ಹೋಗಿ ಪರಿಹಾರ ನೀಡ್ತಾರೆ. ಆದ್ರೆ, ಕರ್ನಾಟಕಕ್ಕೆ ಮಾತ್ರ ಭೇಟಿ ನೀಡುತ್ತಿಲ್ಲ, ಪರಿಹಾರವೂ ಸಿಗುತ್ತಿಲ್ಲ. ಈ ಕುರಿತು ರಾಜ್ಯದ ಬಿಜೆಪಿ ಶಾಸಕರು, ಸಚಿವರು, ಸಂಸದರು ಧ್ವನಿ ಎತ್ತುತ್ತಿಲ್ಲ. ಕೇಂದ್ರದಿಂದ ತಕ್ಷಣವೇ ರಾಜ್ಯಕ್ಕೆ 25 ಸಾವಿರ ಕೋಟಿ ರೂ. ಪರಿಹಾರ ಘೋಷಿಸಬೇಕು. ಇಲ್ಲದಿದ್ದರೆ, ಸಿಎಂ ಯಡಿಯೂರಪ್ಪ ರಾಜೀನಾಮೆ ನೀಡಲಿ ಎಂದರು.
ವಿದ್ಯಾಗಮ ಯೋಜನೆಯನ್ನು ಪೂರ್ಣ ಪ್ರಮಾಣದಲ್ಲಿ ನಿಲ್ಲಿಸಬೇಕು. ಕೊರೊನಾದಿಂದ ಮಕ್ಕಳು, ಶಿಕ್ಷಕರು ಮೃತಪಟ್ಟರೇ ಸರ್ಕಾರದಿಂದ ತಲಾ 1 ಕೋಟಿ ರೂ. ಪರಿಹಾರ ನೀಡಬೇಕೆಂದು ಎಂದು ವಾಟಾಳ್ ನಾಗರಾಜ್.