ಕರ್ನಾಟಕ

karnataka

By

Published : Aug 20, 2020, 5:11 PM IST

ETV Bharat / state

2019ರ ನೆರೆ ಪರಿಹಾರಕ್ಕೆ ಆಗ್ರಹಿಸಿ ಸಂತ್ರಸ್ತ ಅವರಾದಿ ಗ್ರಾಮಸ್ಥರಿಂದ ಪ್ರತಿಭಟನೆ

2019ರಲ್ಲಿ ಸಂಭವಿಸಿದ ಅತಿವೃಷ್ಟಿ ಹಾಗೂ ನೆರೆ ಹಾವಳಿಗೆ ತುತ್ತಾದ ಕುಟುಂಬಗಳಿಗ ಪರಿಹಾರಧನ ನೀಡುವಂತೆ ಆಗ್ರಹಿಸಿ ಸಂತ್ರಸ್ತ ಅವರಾದಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

flood relief
2019ರ ನೆರೆ ಪರಿಹಾರಕ್ಕೆ ಆಗ್ರಹಿಸಿ ಸಂತ್ರಸ್ತ ಅವರಾದಿ ಗ್ರಾಮಸ್ಥರಿಂದ ಪ್ರತಿಭಟನೆ

ಬೆಳಗಾವಿ:ಕಳೆದ ವರ್ಷದ ಅತಿವೃಷ್ಟಿ ಹಾಗೂ ನೆರೆಹಾವಳಿಗೆ ತುತ್ತಾದ ಕುಟುಂಬಗಳಿಗೆ ಪರಿಹಾರಧನ ನೀಡುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದರು ಸಂಕಷ್ಟಕ್ಕೆ ಒಳಗಾದ ಅವರಾದಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ವೇಳೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡ ಮೂಡಲಗಿ ತಾಲೂಕಿನ ಅರಭಾವಿ ಮತಕ್ಷೇತ್ರದ ಅವರಾದಿ ಗ್ರಾಮಸ್ಥರು, ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ ಸಂಭವಿಸಿದ ಅತಿವೃಷ್ಟಿ‌ಗೆ 75ಕ್ಕೂ ಹೆಚ್ಚಿನ ಕುಟುಂಬಗಳಿಗೆ ಈವರೆಗೂ ಪರಿಹಾರ ಸಿಕಿಲ್ಲ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಕಳೆದ ವರ್ಷ ಘಟಪ್ರಭಾ ನದಿಯ ನೆರೆ ಹಾವಳಿಗೆ ಇಲ್ಲಿನ ಹಲವು ಮನೆಗಳಿಗೆ ಹಾನಿಯಾಗಿದೆ. ಹೀಗಿದ್ದರೂ ಸರ್ಕಾರ ಕೇವಲ 10 ಸಾವಿರ ರೂ.ಗಳ ಪರಿಹಾರ ಧನ ವಿತರಿಸಿದೆ. ಆದರೀಗ ಮತ್ತೆ ಮಳೆಯಿಂದ ಅವರಾದಿ ಗ್ರಾಮದ ಮನೆ, ಹೊಲ ಹಾಗೂ ತೋಟಗಳಿಗೆ ನೀರು ನುಗ್ಗಿದೆ. ಇದರಿಂದಾಗಿ ಜೀವನ ನಡೆಸುವುದು ತುಂಬಾ ಕಷ್ಟವಾಗುತ್ತಿದೆ. ಆದಷ್ಟು ಬೇಗ ರಾಜ್ಯ ಸರ್ಕಾರ ಶಾಶ್ವತ ಪರಿಹಾರ ಕಲ್ಪಿಸಬೇಕು. ಬೇರೆಡೆಗೆ ಹೋಗಬೇಕೆಂದ್ರೆ ಇರಲು ಸ್ಥಳವಿಲ್ಲ. ಹೀಗಾಗಿ ನದಿ ದಂಡೆಯಲ್ಲಿರುವಂತಹ ಎಲ್ಲ ಕುಟುಂಬಗಳನ್ನು ಅವರಾದಿ ಗ್ರಾಮದಲ್ಲಿರುವ ಸರ್ಕಾರಿ ಜಾಗಗಳಿಗೆ ಸ್ಥಳಾಂತರ ಮಾಡಬೇಕು. ಗ್ರಾಮದ ಎಲ್ಲ ಕುಟುಂಬದವರಿಗೂ ಸರ್ಕಾರದಿಂದಲೇ ಮನೆಗಳನ್ನು ಕಟ್ಟಿಸಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ABOUT THE AUTHOR

...view details