ಚಿಕ್ಕೋಡಿ : ವಿದ್ಯಾರ್ಥಿನಿಯೊಬ್ಬಳು ಕಾಲೇಜಿಗೆ ಹೋಗಿ ಮರಳಿ ಮೆನೆಗೆ ಬಾರದೇ ಕಾಣೆಯಾಗಿರುವ ಘಟನೆ ನಗರದಲ್ಲಿ ನಡೆದಿದ್ದು, ಪೋಷಕರು ಮಗಳಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕಾಲೇಜು ವಿದ್ಯಾರ್ಥಿನಿ ನಾಪತ್ತೆ... ಪೋಷಕರಲ್ಲಿ ಮನೆ ಮಾಡಿದ ಆತಂಕ - kannada news
ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದವಳು ಮರಳಿ ಮನೆಗೆ ಬಂದಿಲ್ಲವೆಂದು ಪೋಷಕರು ಆತಂಕಕ್ಕೆ ಒಳಗಾಗಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕಾಲೇಜು ವಿದ್ಯಾರ್ಥಿನಿ ನಾಪತ್ತೆ
ಮಲಾಬಾದ ಗ್ರಾಮದ ರಾಮು ಶಿವಲಿಂಗ ಭೋಸಲೆ ಎಂಬುವವರ ಮಗಳು ಮಹಾದೇವಿ(22) ಕಾಣೆಯಾದ ವಿದ್ಯಾರ್ಥಿನಿ. ಅಥಣಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಯುವತಿ ಮೇ 4 ರಂದು ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದವಳು ಮರಳಿ ಬಂದಿಲ್ಲವೆಂದು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.ಈ ಕುರಿತು ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.