ಕರ್ನಾಟಕ

karnataka

ETV Bharat / state

ಪ್ರವಾಹ ಪೀಡಿತ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ, ಪರಿಶೀಲನೆ - ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ

ರಾಜ್ಯದಲ್ಲಿ ಸುರಿದ ಮಳೆಯಿಂದಾಗಿ ಚಿಕ್ಕೋಡಿಯ ಹಲವು ಭಾಗದಲ್ಲಿ ಭೀಕರ ಪರಿಸ್ಥಿತಿ ಉಂಟಾಗಿತ್ತು. ಇದೀಗ ಪ್ರವಾಹಕ್ಕೆ ತುತ್ತಾದ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮಗಳ ಸಂತ್ರಸ್ತರು ಇರುವ ಪರಿಹಾರ ಕೇಂದ್ರಗಳಿಗೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರವಾಹ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ

By

Published : Aug 18, 2019, 10:40 PM IST

ಚಿಕ್ಕೋಡಿ: ಕೃಷ್ಣಾ ನದಿ ಪ್ರವಾಹಕ್ಕೆ ತುತ್ತಾದ ಸ್ಥಳಗಳಾದ ಚಿಕ್ಕೋಡಿ ತಾಲೂಕಿನ ಅಂಕಲಿ, ಮಾಂಜರಿ, ಯಡೂರ ಗ್ರಾಮಗಳ ಸಂತ್ರಸ್ತರು ಇರುವ ಪರಿಹಾರ ಕೇಂದ್ರಗಳಿಗೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ ನೀಡಿ, ಪರಿಶೀಲಿಸಿದರು.

ಪ್ರವಾಹ ಸ್ಥಳಕ್ಕೆ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಭೇಟಿ

ಕಳೆದ 15 ದಿನಗಳಿಂದ ಸಂತ್ರಸ್ತರ ಕೇಂದ್ರದಲ್ಲಿರುವ 10 ಸಾವಿರಕ್ಕೂ ಹೆಚ್ಚು ಜನರಿಗೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಈಗಾಗಲೇ ಚೆಕ್‌ ಮೂಲಕ ಪ್ರತಿ ಕುಟುಂಬಕ್ಕೆ 10 ಸಾವಿರ ರೂಪಾಯಿ ಚೆಕ್‌ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಮನೆ ನಿರ್ಮಾಣ ಮಾಡಲು ತಲಾ 5 ಲಕ್ಷ ಹಣ ಮಂಜೂರಾಗಿದೆ. ಮನೆ ನಿರ್ಮಾಣ ಆಗುವ ತನಕ 10 ತಿಂಗಳ ಬಾಡಿಗೆ ಕೊಡ್ತಿವಿ. ನಿವೇಶನ ಇಲ್ಲದಿದ್ದರೆ ಸರ್ಕಾರದಿಂದ ಸಂತ್ರಸ್ತರು ಹೇಳಿದ ಜಾಗದಲ್ಲಿ ನಿರ್ಮಾಣ ಮಾಡುತ್ತೇವೆ ಎಂದು ಅಂಕಲಿ ಗ್ರಾಮದಲ್ಲಿ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ರು.

ABOUT THE AUTHOR

...view details