ಚಿಕ್ಕೋಡಿ: ದಿನದಿಂದ ದಿನಕ್ಕೆ ವೈದ್ಯರ ನಿರ್ಲಕ್ಷ್ಯದ ಬಗೆಗಿನ ಆರೋಪಗಳು ಹೆಚ್ಚಾಗುತ್ತಲೇ ಇವೆ. ಕೊರೊನಾ ಪಾಸಿಟಿವ್ ಇದ್ದರೂ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡದೇ ಮನೆಗೆ ಕಳುಹಿಸಿದ್ದಾರೆ ಎಂದು ವೈದ್ಯರ ನಡೆಯನ್ನು ಖಂಡಿಸಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಬಾಣಂತಿಗೆ ಕೊರೊನಾ ಪಾಸಿಟಿವ್ ಇರೋದನ್ನು ಹೇಳದ ವೈದ್ಯ: ಗ್ರಾಮಸ್ಥರಿಂದ ಆಕ್ರೋಶ - chikodi latest news
ಬಾಣಂತಿಯನ್ನು ಪರೀಕ್ಷೆಗೆ ಒಳಪಡಿಸಿದ ನಂತರ ಆಕೆಗೆ ಕೊರೊನಾ ಪಾಸಿಟಿವ್ ಇರುವುದು ತಿಳಿದುಬಂದಿದೆ. ಆ ವೇಳೆ ಆಕೆಗೆ ಚಿಕಿತ್ಸೆ ನೀಡುವ ಬದಲು ಆಕೆಯ ಮನೆಗೆ ಕಳುಹಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಮಹಿಳೆ, ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ 2 ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದಾಳೆ. ಇದಾದ ನಂತರ ಆಕೆಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ವರದಿ ಬಂದಿದೆ. ವೈದ್ಯರು ಚಿಕಿತ್ಸೆ ನೀಡುವ ಬದಲು ಮನೆಯಲ್ಲಿ ಆರೈಕೆ ಮಾಡಿಕೊಳ್ಳುವಂತೆ ಹೇಳಿ ಸೋಮವಾರದಂದು ಮನೆ ಕಳುಹಿಸಿದ್ದಾರಂತೆ. ಈ ಬಗ್ಗೆ ಮಹಿಳೆ ಸಂಬಂಧಿಕರು ವೈದ್ಯರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ವೈದ್ಯರು ಮುಂಚಿತವಾಗಿ ಪಾಸಿಟಿವ್ ಬಂದಿರುವುದರ ಬಗ್ಗೆ ತಿಳಿಸಿದ್ದರೆ, ಆಕೆಗೆ ತೋಟದ ಮನೆಯಲ್ಲಿ ನೆಲೆಸಲು ವ್ಯವಸ್ಥೆ ಮಾಡಿಕೊಡಲಾಗುತ್ತಿತ್ತು ಎಂದು ವೈದ್ಯರ ಬಗ್ಗೆ ತೀವ್ರ ಅಸಮದಾನ ಹೊರಹಾಕಿದ್ದಾರೆ.