ಬೆಳಗಾವಿ:ಧಾರವಾಡ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಕೆಲವೇ ಕ್ಷಣಗಳಲ್ಲಿ ಬೆಳಗಾವಿ ಕೇಂದ್ರ ಕಾರಾಗೃಹಕ್ಕೆ ಕರೆತರಲು ಸಿದ್ಧತೆ ನಡೆಸಿದ್ದಾರೆ.
ಕೆಲವೇ ಕ್ಷಣಗಳಲ್ಲಿ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿಗೆ
ಸಿಬಿಐ ಹಾಗೂ ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ತಂಡ ವಿನಯ್ ಕುಲಕರ್ಣಿ ಅವರನ್ನು ಜೈಲಿಗೆ ಕರೆತರಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಿಂಡಲಗಾ ಜೈಲಿನ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ವಿನಯ್ ಕುಲಕರ್ಣಿ
ಸಿಬಿಐ ಹಾಗೂ ಧಾರವಾಡ ಉಪನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ತಂಡ ವಿನಯ್ ಕುಲಕರ್ಣಿ ಅವರನ್ನು ಜೈಲಿಗೆ ಕರೆತರಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಹಿಂಡಲಗಾ ಜೈಲಿನ ಬಳಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಬೆಳಗಾವಿ ಗ್ರಾಮೀಣ ವಿಭಾಗದ ಎಸಿಪಿ ಶಿವಾ ರಡ್ಡಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ವಿನಯ್ ಕುಲಕರ್ಣಿ ಆಗಮನದ ಹಿನ್ನೆಲೆ ಜೈಲು ಸಿಬ್ಬಂದಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಧಾರವಾಡ ನ್ಯಾಯಾಲಯ ವಿನಯ್ ಕುಲಕರ್ಣಿಗೆ ಒಂದು ದಿನದ ಮಟ್ಟಿಗೆ ನ್ಯಾಯಾಂಗ ಬಂಧನಕ್ಕೆ ನೀಡಿರುವ ಹಿನ್ನೆಲೆ ಅವರನ್ನು ಹಿಂಡಲಗಾ ಜೈಲಿಗೆ ಕರೆತರಲಾಗುತ್ತಿದೆ.
Last Updated : Nov 5, 2020, 8:45 PM IST