ಕರ್ನಾಟಕ

karnataka

ETV Bharat / state

ಬೆಳಗಾವಿ ಸುವರ್ಣಸೌಧ ಎದುರು ಶಾವಿಗೆ ಒಣಹಾಕಿದ ಫೋಟೋ ವೈರಲ್: ಸಾರ್ವಜನಿಕರ ಆಕ್ರೋಶ - ಉತ್ತರ ಕರ್ನಾಟಕದ ಜನರ ಸಮಸ್ಯೆಗಳಿಗೆ ಧ್ವನಿಯಾಗಲೆಂದು ನಿರ್ಮಿಸಲಾದ ಸುವರ್ಣಸೌಧ

ಸುವರ್ಣ ಸೌಧವನ್ನು ಉತ್ತರ ಕರ್ನಾಟಕದ ಜನರ ಸಮಸ್ಯೆಗಳಿಗೆ ಧ್ವನಿಯಾಗಲೆಂದು ನಿರ್ಮಿಸಲಾಗಿದೆ. ಆದ್ರೆ ಇದೀಗ ಸೌಧದ ಮುಂದೆ ಶಾವಿಗೆ ಒಣಹಾಕಿರುವ ಫೋಟೋ ವೈರಲ್ ಆಗಿದೆ. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ.

Suvarna souda
ಹಪ್ಪಳ, ಸಂಡಿಗೆ ಶಾವಿಗೆ ಒಣಗಿಸೋಕೆ ಸುವರ್ಣ ಸೌಧ ಬಳಕೆ

By

Published : May 31, 2022, 9:33 PM IST

ಬೆಳಗಾವಿ: ಕುಂದಾನಗರಿಯ ಸುವರ್ಣ ಸೌಧಕ್ಕೆ ಬಿಗಿ ಪೊಲೀಸ್ ಭದ್ರತೆ ನೀಡಿದ್ರೂ, ಇದರ ನಡುವೆ ಸೌಧದ ಮುಂದೆ ಶಾವಿಗೆ ಒಣಹಾಕಿರುವ ಫೋಟೋ ಇದೀಗ ವೈರಲ್ ಆಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಹಪ್ಪಳ, ಸಂಡಿಗೆ ಶಾವಿಗೆ ಒಣಗಿಸೋಕೆ ಸುವರ್ಣ ಸೌಧ ಬಳಕೆಯಾಗುತ್ತಿದೆಯೇ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ತಾಲೂಕಿನ ಹಲಗಾ ಮತ್ತು ಬಸ್ತವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗಲೆಂಬ ಕಾರಣಕ್ಕೆ 400ಕ್ಕೂ ಅಧಿಕ ಕೋಟಿ ರೂಪಾಯಿ ಖರ್ಚು ಮಾಡಿ ಸುವರ್ಣಸೌಧ ನಿರ್ಮಾಣ ಮಾಡಲಾಗಿದೆ. ಉತ್ತರ ಕರ್ನಾಟಕದ ಜನರ ಸಮಸ್ಯೆಗಳಿಗೆ ಪರಿಹಾರ ಕೊಡಬೇಕು ಎಂದು ಸುವರ್ಣ ಸೌಧವನ್ನು ಕಟ್ಟಲಾಗಿದೆ. ಆದರೆ, ಇಲ್ಲಿನ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದಲಾಗಿ ಶಾವಿಗೆ, ಹಪ್ಪಳ, ಸಂಡಿಗೆ ಒಣಗಿಸೋಕೆ ಈ ಸುವರ್ಣ ಸೌಧ ಬಳಕೆಯಾಗುತ್ತಿದೆಯಾ ಎಂಬ ಪ್ರಶ್ನೆ ಎದ್ದಿದೆ.

ಹಪ್ಪಳ, ಸಂಡಿಗೆ ಶಾವಿಗೆ ಒಣಗಿಸೋಕೆ ಸುವರ್ಣ ಸೌಧ ಬಳಕೆ

ಈ ಕುರಿತಂತೆ ಬೆಳಗಾವಿಯ ನಾಗರಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಹಾಸ್ಯಾಸ್ಪದ ರೀತಿಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಸರ್ಕಾರ ಮತ್ತು ಜಿಲ್ಲಾಡಳಿತಗಳ ದಿವ್ಯ ನಿರ್ಲಕ್ಷ್ಯಕ್ಕೆ ಇದು ಹಿಡಿದ ಕೈಗನ್ನಡಿಯಾಗಿದೆ. ಈಗ ಈ ಫೋಟೋಗಳು ಸಾಕಷ್ಟು ವೈರಲ್ ಆಗಿವೆ. ಇದರ ನಿರ್ವಹಣೆಯ ಹೊಣೆ ಹೊತ್ತಿರುವ ಪಿಡಬ್ಲೂಡಿ ಅಧಿಕಾರಿಗಳು ಸುವರ್ಣಸೌಧದ ಕಡೆಗೆ ಇನ್ನೂ ತಿರುಗಿ ನೋಡಿಲ್ಲ. ಈ ಕಟ್ಟಡದ ಭದ್ರತೆಯ ಜವಾಬ್ದಾರಿಯನ್ನು ಹೊತ್ತಿರುವ ಕೈಗಾರಿಕಾ ಭದ್ರತಾ ಪೊಲೀಸ್ ಸರಿಯಾಗಿ ಕರ್ತವ್ಯ ಮಾಡದ ಹಿನ್ನೆಲೆ ಈ ಅವಾಂತರ ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

ಇದನ್ನೂ ಓದಿ:ನಟಿ ಚೇತನ ರಾಜ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು 'ಫ್ಯಾಟ್​' ಸರ್ಜರಿ ಕೇಸ್​: ಯುವತಿ ನರಳಾಟ

For All Latest Updates

TAGGED:

ABOUT THE AUTHOR

...view details