ಬೆಳಗಾವಿ:ಡಿಸೆಂಬರ್ 19ರೊಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಣೆ ಮಾಡುವಂತೆ ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಡಿ.19ರೊಳಗೆ ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದು ಮೀಸಲಾತಿ ಘೋಷಣೆ ಮಾಡಬೇಕು. ಒಂದು ವೇಳೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸದಿದ್ರೆ ಡಿ.22ರಂದು ವಿರಾಟ್ ಪಂಚಶಕ್ತಿ ಸಮಾವೇಶ ಮಾಡಲಾಗುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ. ಮೀಸಲಾತಿ ಘೋಷಿಸಿದ್ರೂ, ಘೋಷಿಸದಿದ್ದರೂ 25 ಲಕ್ಷ ಪಂಚಮಸಾಲಿ ಸಮುದಾಯದ ಜನರ ಸೇರಿಸಲು ಸಿದ್ಧತೆ ನಡೆಸಲಾಗಿದ್ದು, ಸುವರ್ಣಸೌಧ ಬಳಿ ನೂರು ಎಕರೆ ಸ್ಥಳದಲ್ಲಿ ಪಂಚಮಸಾಲಿ ಸಮಾವೇಶಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮೀಸಲಾತಿ ನೀಡಿದರೇ ಡಿ.22ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ ಮಾಡಲಾಗುವುದು, ಇಲ್ಲವಾದಲ್ಲಿ ಡಿಸೆಂಬರ್ 22ರಂದು ಅಂತಿಮ ಹಂತದ ಹೋರಾಟ ನಡೆಸುವುದಾಗಿ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಡಿ. 19ರ ಸಂಜೆ ಸವದತ್ತಿಯಲ್ಲಿ ಪಂಚಮಸಾಲಿ ಸಮಾವೇಶ ನಡೆಯಲಿದ್ದು, ಅಂದೇ ಸವದತ್ತಿಯಿಂದ ಪಾದಯಾತ್ರೆ ಮೂಲಕ ಬೆಳಗಾವಿಯ ಸುವರ್ಣಸೌಧಕ್ಕೆ ಬರಲು ನಿರ್ಧರಿಸಿರುವುದಾಗಿ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಹೇಳಿದ್ದಾರೆ.