ಬೆಳಗಾವಿ: ಮಸಗುಪ್ಪಿ ಮಹಾಲಕ್ಷ್ಮಿ ದೇವಸ್ಥಾನ ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುವ ಪುಣ್ಯಕ್ಷೇತ್ರವಾಗಿ ಬೆಳೆಯುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಮಸಗುಪ್ಪಿ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಬಾಲಚಂದ್ರ ಜಾರಕಿಹೊಳಿ ಭೇಟಿ ಓದಿ: ರಾಜ್ಯದ 17 ನದಿಗಳು ಕಲುಷಿತ.. ಕೈಗಾರಿಕೆಗಳ ತ್ಯಾಜ್ಯ ನೀರು ಸಂಸ್ಕರಣೆ ಕಡ್ಡಾಯ
ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಮಸಗುಪ್ಪಿ ಮಹಾಲಕ್ಷ್ಮೀದೇವಿ ಭಕ್ತರ ಸಕಲ ಇಷ್ಟಾರ್ಥಗಳನ್ನು ನೆರವೇರಿಸುತ್ತ ಪ್ರಸಿದ್ಧ ಯಾತ್ರಾ ಸ್ಥಳವಾಗಿ ಪರಿವರ್ತನೆಯಾಗಿದೆ ಎಂದು ಹೇಳಿದರು.
ಮಹಾಲಕ್ಷ್ಮೀದೇವಿ ದೇವಸ್ಥಾನದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಾಗಿದ್ದು, ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ ನೋಡುಗ ಭಕ್ತರನ್ನು ಕಂಗೊಳಿಸುತ್ತಿದೆ. 2.50 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಹೊಸ ಕಟ್ಟಡ, ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನದ ಸಿಖರ, 50 ಲಕ್ಷ ರೂ. ವೆಚ್ಚದಲ್ಲಿ ಯಾತ್ರಾ ನಿವಾಸ, ಭಕ್ತಾಧಿಗಳ ಊಟದ ಅನುಕೂಲಕ್ಕಾಗಿ ಭೋಜನಾಲಯ ಸೇರಿದಂತೆ ಅನೇಕ ಕೆಲಸಗಳು ನಡೆದಿದ್ದು, ಭಕ್ತರಿಗೆ ಸಕಲ ಮೂಲ ಸೌಕರ್ಯಗಳನ್ನು ಇಲ್ಲಿ ದೇವಸ್ಥಾನದ ಆಡಳಿತ ಮಂಡಳಿಯವರು ಒದಗಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ಶೃದ್ಧೆ, ಭಕ್ತಿ ಪೂರ್ವಕವಾಗಿ ನಡೆದುಕೊಂಡರೆ ದೇವರು ತಮ್ಮೆಲ್ಲ ಇಷ್ಟಾರ್ಥಗಳನ್ನು ನೆರವೇರಿಸುತ್ತಾನೆ. ಪೂಜೆ, ಪುನಸ್ಕಾರಗಳಿಂದ ಆತ್ಮಕ್ಕೆ ಮನಃಶಾಂತಿ ದೊರೆಯುತ್ತದೆ. ಭಾರತೀಯ ಸಂಸ್ಕೃತಿ ಇತಿಹಾಸ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಹೇಳಿದರು.
ಫೆ. 22 ರಿಂದ 24 ರವರೆಗೆ ಮಸಗುಪ್ಪಿಯಲ್ಲಿ ನಡೆಯಲಿರುವ ಮಹಾಲಕ್ಷ್ಮೀದೇವಿ ಹಾಗೂ ಬಸವೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ದೇವಸ್ಥಾನಕ್ಕೆ ಆಗಮಿಸಿದ ಬಾಲಚಂದ್ರ ಜಾರಕಿಹೊಳಿ ಅವರನ್ನು ಗ್ರಾಮದ ಹಿರಿಯರು ಸತ್ಕರಿಸಿದರು.