ಅಥಣಿ: 2ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಅಥಣಿ ತಾಲ್ಲೂಕಿನ 41 ಗ್ರಾಮ ಪಂಚಾಯಿತಿ ಚುನಾವಣೆಗೆ ಮುಂಜಾನೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳ ಕಡೆಗೆ ಆಗಮಿಸಿದ್ದಾರೆ.
ಕೋವಿಡ್- 19 ನಿಯಮಾನುಸಾರ ಸಾಮಾಜಿಕ ಅಂತರ ಕಾಪಾಡಿಕೊಂಡು ಮತದಾರರು ಹುಮ್ಮಸ್ಸಿನಿಂದ ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. ತಾಲೂಕಿನಲ್ಲಿ 1,735 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು, 258 ಬೂತ್ಗಳನ್ನು ನಿರ್ಮಿಸಿ ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿದೆ.