ಬೆಳಗಾವಿ : ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಹಾಗೂ ಮ್ಯಾನೇಜ್‍ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ಅಸ್ಮತ್ ಶರ್ಮಿನ್ ಟಿ.ಎಸ್ ಅವರು ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 13 ಚಿನ್ನದ ಪದಕ ಪಡೆದುಕೊಳ್ಳುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ.
ತಾಲೂಕಿನ ಪೀರನವಾಡಿ ಗ್ರಾಮದಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನ ಸಂಗಮ ಆವರಣದ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆದ ವಿಟಿಯು 20ನೇ ಘಟಿಕೋತ್ಸವ ಸಮಾರಂಭದಲ್ಲಿ ರಕ್ಷಣಾ ಇಲಾಖೆಯ ಮಾಜಿ ವೈಜ್ಞಾನಿಕ ಸಲಹೆಗಾರ ಪದ್ಮವಿಭೂಷಣ ಪುರಸ್ಕೃತ ಡಾ. ವಿ.ಕೆ ಆತ್ರೆ ಚಿನ್ನದ ಪದಕ ಪ್ರದಾನ ಮಾಡಿದರು.
ಸಾಧಕರಿಗೆ ಪದಕ ಪ್ರದಾನ ಮಾಡಲಾಯಿತು ಓದಿ : 'ನಾನು 35 ಪರ್ಸೆಂಟ್ ವಿದ್ಯಾರ್ಥಿ, ನೀವು ಯಾರ್ ಫಸ್ಟ್‌ಕ್ಲಾಸ್ ಬರ್ತಿರೋ ಅವ್ರಿಗೆಲ್ಲ ತಲಾ ₹5..'
ಬೆಂಗಳೂರಿನ ಬಿಎಂಎಸ್ ತಾಂತ್ರಿಕ ವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಅರುಣ ಡಿ. 7 ಚಿನ್ನದ ಪದಕ, ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅಪೂರ್ವ ಹೆಚ್.ಆರ್ 7 ಹಾಗೂ ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಗಗನಾ ರೆಡ್ಡಿ 7 ಚಿನ್ನದ ಪದಕಗಳಿಗೆ ಮುತ್ತಿಕ್ಕಿದರು. ಇದರ ಜೊತೆಗೆ ಒಟ್ಟು 11 ವಿದ್ಯಾರ್ಥಿಗಳಿಗೆ ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು. ಇದೇ ವೇಳೆ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಪ್ರೊ.ಅಶುತೋಷ್ ಶರ್ಮ ಅವರಿಗೆ “ಡಾಕ್ಟರ್ ಆಫ್ ಸೈನ್ಸ್” ಪದವಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ.ಕರಿಸಿದ್ದಪ್ಪ, ಕುಲಸಚಿವ ಪ್ರೊ. ಆನಂದ ದೇಶಪಾಂಡೆ ಹಾಗೂ ಮೌಲ್ಯಮಾಪನ ಕುಲಸಚಿ ಪ್ರೊ.ಬಿ.ಈ ರಂಗಸ್ವಾಮಿ ಇದ್ದರು.