ಅಥಣಿ(ಬೆಳಗಾವಿ): ತಾಲೂಕಿನ ಶಿರಹಟ್ಟಿ ಗ್ರಾಮದ ಮೂವತ್ತೈದಕ್ಕೂ ಹೆಚ್ಚು ಕುಟುಂಬಗಳು ಕಳೆದ 25 ದಿನಗಳಿಂದ ನೀರಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ಖಾಲಿ ಕೊಡ ಪ್ರದರ್ಶಿಸಿ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.
ಡಿಸಿಎಂ ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲೇ ನೀರಿನ ಸಮಸ್ಯೆ: ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ - ಬೆಳಗಾವಿ ಜಿಲ್ಲೆ ಅಥಣಿ
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಕಳೆದ ಇಪ್ಪತ್ತೈದು ದಿನಗಳ ಹಿಂದೆ ಕೊಳವೆ ಬಾವಿ ಮೋಟಾರ್ ಹಾಳಾಗಿದ್ದು, ಜನ-ಜಾನುವಾರುಗಳಿಗೆ ನೀರಿಲ್ಲದೆ ಪರದಾಡುವಂತಾಗಿದೆ.
ಡಿಸಿಎಂ ಲಕ್ಷ್ಮಣ್ ಸವದಿ ಸ್ವಕ್ಷೇತ್ರದಲ್ಲೇ ನೀರಿನ ಸಮಸ್ಯೆ: ಖಾಲಿ ಕೊಡ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿದ ಜನ
ಕಳೆದ ಇಪ್ಪತ್ತೈದು ದಿನಗಳ ಹಿಂದೆ ಕೊಳವೆ ಬಾವಿ ಮೋಟಾರ್ ಹಾಳಾಗಿದ್ದು, ಜನ-ಜಾನುವಾರುಗಳಿಗೆ ನೀರಿಲ್ಲದೆ ಪರದಾಡುವಂತಾಗಿದೆ. ಅಕ್ಕ ಪಕ್ಕದಲ್ಲಿ ಎಲ್ಲೂ ನೀರಿನ ಮೂಲ ಇಲ್ಲದೆ ತುಂಬಾ ಸಂದಿಗ್ಧ ಪರಿಸ್ಥಿತಿ ಎದುರಿಸುವಂತಾಗಿದೆ. ಇನ್ನೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಸಹ ಯಾರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥ ಸಂಜೀವ ಶಿವನೂರ ಆರೋಪಿಸಿದ್ದಾರೆ.