ಕರ್ನಾಟಕ

karnataka

ETV Bharat / state

ಚಿಕ್ಕೋಡಿ ಭಾಗದ ನದಿಗಳಲ್ಲಿ ನೀರಿನ ಮಟ್ಟ ಇಳಿಕೆ: ನಾಲ್ಕು ಸೇತುವೆಗಳು ಸಂಚಾರಕ್ಕೆ ಮುಕ್ತ

ಮಳೆ ಕಡಿಮೆಯಾಗಿ ನದಿಗಳಲ್ಲಿ ನೀರಿನ ಮಟ್ಟ ಕಡಿಮೆಯಾದ ಹಿನ್ನೆಲೆ, ಚಿಕ್ಕೋಡಿ ಉಪವಿಭಾಗದ ನಾಲ್ಕು ಸೇತುವೆಗಳು ಈಗ ಸಂಚಾರಕ್ಕೆ ಮುಕ್ತವಾಗಿವೆ.

water level decreased in rivers of chikkodi
ಸೇತುವೆಗಳೀಗ ಸಂಚಾರಕ್ಕೆ ಮುಕ್ತ

By

Published : Jun 24, 2021, 3:25 PM IST

ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಸೇತುವೆಗಳು ಜಲಾವೃತಗೊಂಡಿದ್ದವು. ಆದರೆ, ಸದ್ಯ ಮಳೆಯ ಪ್ರಮಾಣ ಕಡಿಮೆ ಆಗಿದ್ದರಿಂದ ಕೃಷ್ಣಾ, ವೇದಗಂಗಾ ಮತ್ತು ದೂಧ್​ಗಂಗಾ ನದಿಗಳಲ್ಲಿ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಚಿಕ್ಕೋಡಿ ಉಪವಿಭಾಗದ ನಾಲ್ಕು ಸೇತುವೆಗಳು ಈಗ ಸಂಚಾರಕ್ಕೆ ಮುಕ್ತವಾಗಿವೆ.

ಚಿಕ್ಕೋಡಿ ಭಾಗದ ಸೇತುವೆಗಳೀಗ ಸಂಚಾರಕ್ಕೆ ಮುಕ್ತ

ಚಿಕ್ಕೋಡಿ ಉಪವಿಭಾಗದ ಯಡೂರ- ಕಲ್ಲೋಳ, ಮಾಂಜರಿ- ಸೌದತ್ತಿ, ಎಕ್ಸಂಬಾ-ದಾನವಾಡ ಹಾಗೂ ಮಲಿಕವಾಡ-ದತ್ತವಾಡ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ. ರಾಜಾಪೂರ ಬ್ಯಾರೇಜ್ ಮುಖಾಂತರ ಕೃಷ್ಣಾನದಿಗೆ 66 ಸಾವಿರ ಅಧಿಕ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಹಿಪ್ಪರಗಿ ಬ್ಯಾರೇಜ್​ನಿಂದ 80 ಸಾವಿರ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.

ಇದನ್ನೂ ಓದಿ:ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ABOUT THE AUTHOR

...view details