ಚಿಕ್ಕೋಡಿ(ಬೆಳಗಾವಿ) :ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಮಹಾರಾಷ್ಟ್ರದ ಕೋಯ್ನಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಇದರಿಂದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ.
ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗುತ್ತಿದೆ. ನಿನ್ನೆ ಸಂಜೆ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು. ಸದ್ಯ 45ಸಾವಿರ ಕ್ಯೂಸೆಕ್ ನೀರು ಸೇರಿ ಒಟ್ಟಾರೆ 70 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.