ಕರ್ನಾಟಕ

karnataka

ETV Bharat / state

ಅನರ್ಹ ಶಾಸಕರ ಬಗ್ಗೆ ಚಿಂತೆ ಮಾಡುವ ಅಗತ್ಯತೆ ನಮಗಿಲ್ಲ: ಸವದಿ ಬಾಂಬ್​ - ಅನರ್ಹ ಶಾಸಕರ ಅರ್ಜಿ ವಿಚಾರಣೆ

ಬೆಳಗಾವಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅನರ್ಹರ ಬಗ್ಗೆ ನಾವೇಕೆ ಚಿಂತೆ ಮಾಡಬೇಕು. ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

By

Published : Oct 25, 2019, 9:46 AM IST

Updated : Oct 25, 2019, 10:02 AM IST

ಬೆಳಗಾವಿ: ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ‌ಬೆಳಗಾವಿಯಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸುಪ್ರೀಂಕೋರ್ಟ್​ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸವದಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಅನರ್ಹರ ಬಗ್ಗೆ ನಾವೇಕೆ ಚಿಂತೆ ಮಾಡಬೇಕು. ಅವರ ಬಗ್ಗೆ ನಾವು ಚಿಂತನೆ ಮಾಡುವ ಅವಶ್ಯಕತೆ ನಮಗಿಲ್ಲ ಎಂದಿದ್ದಾರೆ.

ಅನರ್ಹ ಶಾಸಕರಿಗೂ ನಮಗೂ ಯಾವುದೇ ಸಂಬಂಧವಿಲ್ಲ-ಲಕ್ಷ್ಮಣ ಸವದಿ

ಅನರ್ಹರು ನಮ್ಮ ಪಕ್ಷಕ್ಕೆ ಬರುವ ಕುರಿತು ಎಲ್ಲೂ ಹೇಳಿಲ್ಲ. ಸ್ಪೀಕರ್ ಅನರ್ಹಗೊಳಿಸಿದ್ದಕ್ಕೆ ಅವರು ಸುಪ್ರೀಂಕೋರ್ಟ್​ಗೆ ಹೋಗಿದ್ದಾರೆ. ಅವರಿಗೆ ನ್ಯಾಯಬೇಕೆಂದು, ಕಾಂಗ್ರೆಸ್​​ನವರು ತಮಗೆ ನ್ಯಾಯಬೇಕೆಂದು ಕೋರ್ಟ್​ಗೆ ಹೋಗಿದ್ದಾರೆ. ಇದು ಅವರ ಮಧ್ಯದ ವ್ಯಾಜ್ಯ. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಇದಕ್ಕೆ ನಾವ್ಯಾಕೆ ಉತ್ತರಿಸಬೇಕು.ಈ ಕ್ಷಣದವರೆಗೂ ಅನರ್ಹರಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

Last Updated : Oct 25, 2019, 10:02 AM IST

ABOUT THE AUTHOR

...view details